LPG Connection: ಹೊಸ ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ, ದಾಖಲೆ ಸಲ್ಲಿಕೆ ಹೇಗೆ?
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಗ್ಯಾಸ್ ಏಜೆನ್ಸಿಗಳಿಂದ ಉಜ್ವಲ-3 ಅಡಿಯಲ್ಲಿ ಹೊಸ ಗ್ಯಾಸ್ ಸಂಪರ್ಕ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟದಲ್ಲಿ ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳು ಏಜೆನ್ಸಿಗಳಿಗೆ ನೇರವಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಸೌಕರ್ಯ ಪಡೆಯಬಹುದು.
18 ವರ್ಷ ಮೇಲ್ಪಟ್ಟ ವಯಸ್ಕ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬದಲ್ಲಿ ಈಗಾಗಲೇ ಗ್ಯಾಸ್ ಸಂಪರ್ಕ ಇದ್ದರೆ, ಹೊಸ ಸಂಪರ್ಕ ಸಿಗುವುದಿಲ್ಲ. ಕುಟುಂಬದ ಯಾವುದೇ ಸದಸ್ಯರಿಗೆ ತಿಂಗಳಿಗೆ ₹10,000 ಆದಾಯ ಇರಬಾರದು. ಸರ್ಕಾರಿ ಉದ್ಯೋಗಿಗಳಿಗೆ ಈ ಸೌಲಭ್ಯವಿಲ್ಲ. ಸುಮಾರು 2.5 ಎಕರೆ ನೀರಾವರಿ ಅಥವಾ 5 ಎಕರೆ ಕೃಷಿ ಭೂಮಿ, ಕಿಸಾನ್ ಕ್ರೆಡಿಟ್ ಕಾರ್ಡ್‌ನಲ್ಲಿ ₹50,000ಕ್ಕಿಂತ ಹೆಚ್ಚು ಸಾಲ ಇರುವಂತಿಲ್ಲ. 30 ಚದರ ಅಡಿ ಮನೆ ಅಥವಾ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರಬಾರದು. ಈ ಅರ್ಹತೆಗಳಿರುವ ಬಡ ಮಹಿಳೆಯರು ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು
ಬಿಪಿಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್, ವಯಸ್ಸು ಪ್ರಮಾಣಪತ್ರ, ಬ್ಯಾಂಕ್ ಪಾಸ್‌ಬುಕ್ ಫೋಟೋ, ಪಾಸ್‌ಪೋರ್ಟ್ ಫೋಟೋ, ಪಡಿತರ ಚೀಟಿ, ಕೆವೈಸಿ ಅರ್ಜಿ, ಘೋಷಣೆ ಪತ್ರ ಈ ದಾಖಲೆ ಮೂಲಕ ಸಕಾಲದಲ್ಲಿ ಅರ್ಜಿ ಸಲ್ಲಿಸಬಹುದು. ಪುರುಷರು ಈ ಯೋಜನೆಗೆ ಅರ್ಹರಲ್ಲ.
ಬಡ ಮಹಿಳೆಯರು ತಮ್ಮ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಎಲ್ಲ ದಾಖಲಾತಿಗಳೊಂದಿಗೆ ನಿಮ್ಮ ಜಿಲ್ಲೆಯಲ್ಲಿ ಹೊಸ ಗ್ಯಾಸ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಈಗಾಗಲೇ ಈ ಸಂಬಂಧ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಉಜ್ವಲ್ ಸಮಿತಿ (ಡಿವಿಸಿ) ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮಹಿಳಾ ಫಲಾನುಭವಿಗಳಿಗೆ ಮಾತ್ರವೇ ಇದೆ. ಪುರುಷರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅವಕಾಶವಿಲ್ಲ. 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಎಲ್‌ಪಿಜಿ ಸಿಲಿಂಡರ್ ಸೇವೆಗೆ ಅರ್ಹತೆ ಪಡೆಯಬಹುದು. ಒಂದು ವೇಳೆ ಈಗಾಗಲೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನೀವು ಹೊಂದಿದ್ದರೆ, ನಿಮ್ಮ ಅರ್ಜಿ ರದ್ದಾಗಲಿದೆ.
ಇತ್ತೀಚೆಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ ಕಡಿಮೆಯಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 10 ರೂಪಾಯಿವರೆಗೆ ಕಡಿಮೆಯಾಗಿದ್ದು, ಈಗಾಗಲೇ ಜಾರಿಯಲ್ಲಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 25 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕಗಳನ್ನು ನೀಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿದೆ. ಇದರಿಂದ ಹಲವು ಮಹಿಳೆಯರಿಗೆ ಹೊಸ ಎಲ್‌ಪಿಜಿ ಸಂಪರ್ಕ ಸಿಗಲಿದೆ.












Click it and Unblock the Notifications