• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನವೆಂಬರ್ 8ರಿಂದ ರಾಜ್ಯದ ಜನತೆಗೆ ಹೊಸ ಪತ್ರಿಕೆ ಲೋಕಾರ್ಪಣೆ

|
Google Oneindia Kannada News

ಬೆಂಗಳೂರು, ನ 7: "ಪಕ್ಷ ಸಂಘಟನೆಗೆ ಬಿಡದಿ ತೋಟದಲ್ಲಿ ಕಾರ್ಯಗಾರ ನಡೆಸಿದ ನಂತರ ಇದೀಗ ಮತ್ತೆ ಎರಡನೇ ಹಂತದ ಜೆಡಿಎಸ್ ಸಂಘಟನಾ ಕಾರ್ಯಗಾರ ಸೋಮವಾರದಿಂದ ( ನವೆಂಬರ್ 8-15) ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿದೆ" ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿರು, "ಎಲ್ಲಾ ಹಂತಗಳಲ್ಲೂ ಪಕ್ಷವನ್ನು ಸಂಘಟನೆ ಮಾಡಲು ಈ ಕಾರ್ಯಗಾರ ಸಹಕಾರಿ ಆಗಲಿದೆ. ಎಂಟು ದಿನಗಳ‌ ಕಾಲ ಹಾಲಿ,‌ ಮಾಜಿ ಶಾಸಕರು,‌ ಪದಾಧಿಕಾರಿಗಳ ಸಭೆ ಇಲ್ಲಿ ನಡೆಯಲಿದೆ. ನವೆಂಬರ್ 15ರಂದು ಈ ಕಾರ್ಯಗಾರ ಅಂತ್ಯವಾಗಲಿದೆ" ಎಂದು ಎಚ್‌ಡಿಕೆ ಹೇಳಿದ್ದಾರೆ.

ಉಪ ಚುನಾವಣೆ: ಎಚ್‌ಡಿಕೆ ಪಾಲಿಗೆ ಅಕ್ಷರಶಃ ವಿಲನ್ ಆದ ಜಮೀರ್ ಅಹ್ಮದ್ಉಪ ಚುನಾವಣೆ: ಎಚ್‌ಡಿಕೆ ಪಾಲಿಗೆ ಅಕ್ಷರಶಃ ವಿಲನ್ ಆದ ಜಮೀರ್ ಅಹ್ಮದ್

"ದಿನಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮಹತ್ವದ ಈ ಸಭೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಕಠಿಣ ಮತ್ತು ಸ್ಪಷ್ಟ ಮಾರ್ಗಸೂಚಿ ನೀಡಲಾಗುವುದು. ತದ ನಂತರ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸೂಚಿಸಲಾಗುವುದು" ಎಂದು ಕುಮಾರಸ್ವಾಮಿ ತಿಳಿಸಿದರು.

 ಕೇದಾರನಾಥ ದೇವಾಲಯದ ಜೀರ್ಣೋದ್ದಾರ: ಪ್ರಧಾನಿಗೆ ದೇವೇಗೌಡರ ಶಹಬ್ಬಾಸ್ ಗಿರಿ ಕೇದಾರನಾಥ ದೇವಾಲಯದ ಜೀರ್ಣೋದ್ದಾರ: ಪ್ರಧಾನಿಗೆ ದೇವೇಗೌಡರ ಶಹಬ್ಬಾಸ್ ಗಿರಿ

"ಸೋಮವಾರದಂದು ಪಕ್ಷದ ವಿಚಾರಗಳನ್ನು ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಮಾಸಿಕ ' ಜನತಾ ಪತ್ರಿಕೆ ' ಯನ್ನು ಬಿಡುಗಡೆ ಮಾಡಲಾಗುವುದು. ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರು ಪತ್ರಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ" ಎಂದು ಕುಮಾರಸ್ವಾಮಿ ಹೇಳಿದರು.

 ನನ್ನ ಸಂಪಾದಕೀಯ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದೆ

ನನ್ನ ಸಂಪಾದಕೀಯ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದೆ

"ನನ್ನ ಸಂಪಾದಕೀಯ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದ್ದು, ನಾಡಿನ ಜನರ ಆಶೋತ್ತರಗಳನ್ನು ಈಡೇರಿಸಲು ಹಾಗೂ ಪಕ್ಷದ ಧ್ವನಿಯನ್ನು ಜನರಿಗೆ ಮುಟ್ಟಿಸುವ ಗುರಿಯನ್ನು ಹೊಂದಿದೆ. ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ದಿಕ್ಸೂಚಿಯಾಗಿ ಹಾಗೂ ಮಾರ್ಗದರ್ಶಿಯಾಗಿ ಮುನ್ನಡೆಸುತ್ತದೆ. ನಾಡು, ನುಡಿ, ನೆಲ, ಜಲ, ಭಾಷೆ ಇತ್ಯಾದಿ ವಿಷಯಗಳನ್ನು ಒಳಗೊಳ್ಳುವ ಪತ್ರಿಕೆ ಇದಾಗಿದೆ. ಹಿರಿಯ ಪತ್ರಕರ್ತರಾದ ರಾಮಯ್ಯನವರು ಪತ್ರಿಕೆಯನ್ನು ಬಿಡುಗಡೆ ಮಾಡಲಿದ್ದಾರೆ" ಎಂದು ಕುಮಾರಸ್ವಾಮಿ ಪತ್ರಿಕೆ ಬಗ್ಗೆ ಮಾಹಿತಿ ನೀಡಿದರು.

 ಕೆಲವರು ನಮ್ಮ ಮಿಷನ್ 123 ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ

ಕೆಲವರು ನಮ್ಮ ಮಿಷನ್ 123 ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ

"ಕೆಲವರು ನಮ್ಮ ಮಿಷನ್ 123 ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ, ಹಾಗೆ ಮಾತನಾಡುವ ಅಗತ್ಯವಿಲ್ಲ. 2023ರ ನಮ್ಮ ಗುರಿ ಏನಿದೆ ಅದನ್ನು ಮುಟ್ಟುತ್ತೇವೆ. ನಮ್ಮ ದಾರಿ ಮತ್ತು ಗುರಿಯ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಯಾರೂ ಈ ಬಗ್ಗೆ ಉಪದೇಶ ಮಾಡುವ ಅಗತ್ಯ ಇಲ್ಲ . ಪಕ್ಷ ಬಿಟ್ಟವರಿಂದ ಸಂಘಟನೆಗೆ ಯಾವುದೇ ಶಕ್ತಿ ಬಂದಿಲ್ಲ. ಪಕ್ಷದಿಂದ ಅನುಕೂಲ ಪಡೆದುಕೊಂಡು ಕೆಲವರು ಹೋಗುತ್ತಿದ್ದಾರೆ. ಯಾರು ಯಾವಾಗ ಪಕ್ಷ ಬಿಡುತ್ತಾರೆ ಎನ್ನುವ ಮಾಹಿತಿ ನನಗೆ ಎರಡು ವರ್ಷಗಳ ಹಿಂದೆಯೇ ಇದೆ" ಎಂದು ಕುಮಾರಸ್ವಾಮಿ ವಿರೋಧಿಗಳಿಗೆ ಬುದ್ದಿಮಾತನ್ನು ಹೇಳಿದ್ದಾರೆ.

 ನನಗೆ ಯಾವ ಶಾಕ್ ಆಗೋದಿಲ್ಲ. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ

ನನಗೆ ಯಾವ ಶಾಕ್ ಆಗೋದಿಲ್ಲ. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ

"ಮಾಧ್ಯಮದವರಾದ ನಿಮಗೆ ಈಗ ಅದು ಹೊಸದು ಅನ್ನಿಸಬಹುದು. ಕೆಲವರು ದೈಹಿಕವಾಗಿ ಇಲ್ಲೇ ಇರಬಹುದು. ಮಾನಸಿಕವಾಗಿ ಬೇರೆ ಕಡೆ ಹೋಗಿದ್ದಾರೆ. ಬಿಜೆಪಿ, ಜೆಡಿಎಸ್ ನಿಂದ ನಮ್ಮ ಪಕ್ಷಕ್ಕೆ ಬರುತ್ತಾರೆ ಅಂತಾ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಅದರಿಂದ ನನಗೆ ಯಾವ ಶಾಕ್ ಆಗೋದಿಲ್ಲ. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ" ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರವನ್ನು ನೀಡಿದ್ದಾರೆ.

 ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ದಂಧೆ

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ದಂಧೆ

"ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ದಂಧೆಯ ಬಗ್ಗೆ ಹಿಂದೆನೇ ಹೇಳಿದ್ದೆ. ಶನಿವಾರ ಅದರ ಕಿಂಗ್ ಪಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ನಾನು ಪ್ರಧಾನಿಯವರಿಗೆ ಪತ್ರವನ್ನು ಈ ವಿಚಾರದಲ್ಲಿ ಬರೆದಿದ್ದೆ. ಅದರ ಆಧಾರದ ಮೇಲೆ ಈಗ ತನಿಖೆ ಆರಂಭವಾಗಿದೆ. ಹೆಚ್ಚು ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ, ನನ್ನ ಪಕ್ಷದ ಸಂಘಟನೆ ನನಗೆ ಆದ್ಯತೆ"ಎಂದು ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸರವಣ ಹಾಜರಿದ್ದರು.

English summary
New Monthly News Paper In Kannada Will Start From November 8. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion