ಕರ್ನಾಟಕ ಕಾಂಗ್ರೆಸ್ ಮುಖ್ಯಮಂತ್ರಿ ಆಕಾಂಕ್ಷಿಗಳ ಸಾಲಿಗೆ ಹೊಸ ಹೆಸರು ಸೇರ್ಪಡೆ

ಬೆಂಗಳೂರು, ಮಾ.9: ಕರ್ನಾಟಕದಲ್ಲಿ ಮುಂದಿನ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂಬ ರೇಸ್‌ಗೆ ಮತ್ತೊಬ್ಬರು ಸೇರ್ಪಡೆಯಾಗಿದ್ದಾರೆ.

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಸ್ವಲ್ಪ ಮಂಕಾಗಿದ್ದರೂ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಆಸೆಯನ್ನಂತೂ ಬಿಟ್ಟಿಲ್ಲ. ಈಗಾಗಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯದಲ್ಲಿ ಓಡಾಡುತ್ತಿದ್ದಾರೆ. ಅವರ ಹಿಂಬಾಲಕರು ನಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಈಗ ಆ ಸಾಲಿಗೆ ಹೊಸದೊಂದು ಸೇರ್ಪಡೆಯಾದಂತೆ ಕಾಣಿಸುತ್ತಿದೆ.

ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ ಅವರು ತಮ್ಮ ಪದಗ್ರಹಣ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

New name added to Karnataka Congress chief minister aspirants

ಪ್ರಚಾರ ಸಮಿತಿ ಅಧ್ಯಕ್ಷರಾದ ನಂತರ ನಿಮ್ಮ ಹೆಸರು ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ನಲ್ಲಿ ಬರುವುದೇ ಎಂಬ ಪ್ರಶ್ನೆಗೆ, 'ಕೂಸು ಹುಟ್ಟುವ ಮುನ್ನ ಕುಲಾವಿ ಒಲೆದರು ಎನ್ನುವುದಕ್ಕಿಂತ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಸಿಎಂ ಯಾರಾಗುತ್ತಾರೆ ಎಂದು ಹೈಕಮಾಂಡ್ ಘೋಷಣೆ ಮಾಡುತ್ತದೆ' ಎಂದರು. ಆ ಮೂಲಕ ತಾವು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದು ನೇರವಾಗಿ ಹೇಳದೆ, ತಾವು ಸಹ ರೇಸ್‌ನಲ್ಲಿ ಇರುವುದರ ಸಂದೇಶ ನೀಡಿದರು.

ಮಾ.28ರಂದು ಅಧಿಕಾರ ಸ್ವೀಕಾರ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಅವರ ಪದಗ್ರಹಣ ಸಮಾರಂಭ ಮಾ.28ರಂದು ಮಧ್ಯಾಹ್ನ 3ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ.

New name added to Karnataka Congress chief minister aspirants

'ಪ್ರಚಾರ ಸಮಿತಿ ಅಧ್ಯಕ್ಷನಾಗಿ ಇದೇ 28ರಂದು ಎಲ್ಲ ನಾಯಕರು, ಶಾಸಕರು, ಮಾಜಿ ಶಾಸಕರು, ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿ ನನ್ನ ಕೆಲಸ ಆರಂಭಿಸುತ್ತೇನೆ. ನನ್ನ ಕಾರ್ಯಕ್ರಮದ ಬಗ್ಗೆ ಪದಗ್ರಹಣ ಕಾರ್ಯಕ್ರಮದ ವೇಳೆ ಹೇಳುತ್ತೇನೆ. ಪ್ರಚಾರ ಸಮಿತಿ ಅಧ್ಯಕ್ಷನಾದ ನಂತರ ನಾನು ಪಕ್ಷದ ವರ್ಚಸ್ಸು ಹೆಚ್ಚಿಸಬೇಕಾಗುತ್ತದೆ. ಪ್ರಚಾರ ಸಮಿತಿಯ ಪದಾಧಿಕಾರಿಗಳ ನೇಮಕ ಕುರಿತು ರಾಜ್ಯ ಉಸ್ತುವಾರಿ ಸುರ್ಜೆವಾಲ ಹಾಗೂ ಎಲ್ಲ ನಾಯಕರ ಜತೆ ಚರ್ಚಿಸಿ ಮಾಡುತ್ತೇನೆ' ಎಂದು ಹೇಳಿದರು.

'ನಾನು 5 ಬಾರಿ ಶಾಸಕನಾಗಿ, 1 ಬಾರಿ ಸಂಸದನಾಗಿ, 5 ವರ್ಷ ಜಲ ಸಂಪನ್ಮೂಲ ಸಚಿವನಾಗಿ ಹಾಗೂ ಗೃಹ ಸಚಿವನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಇದ್ದು, ಎಲ್ಲ ನಾಯಕರು, ಕಾರ್ಯಕರ್ತರು ಸಾಕಷ್ಟು ಸಲಹೆ ನೀಡಿದ್ದಾರೆ. ನಾನು ಅಧಿಕಾರ ವಹಿಸಿಕೊಂಡ ನಂತರ ಹಿರಿಯ ನಾಯಕರ ಸಭೆ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಿ, ನಂತರ ಯುವ ಮುಖಂಡರು, ಶಾಸಕರ ಅಭಿಪ್ರಾಯ ಪಡೆದು ನಮ್ಮ ಕಾರ್ಯತಂತ್ರ ರೂಪಿಸುತ್ತೇನೆ. ಉಳಿದ ವಿಚಾರವನ್ನು ಪದಗ್ರಹಣ ಕಾರ್ಯಕ್ರಮದಲ್ಲಿ ಹೇಳುತ್ತೇನೆ' ಎಂದು ಎಂ.ಬಿ. ಪಾಟೀಲ್ ಹೇಳಿದರು.

ಸವಾಲಿನ ಜವಾಬ್ದಾರಿ:

'ನನಗೆ ಸಿಕ್ಕಿರುವುದು ನಿಶ್ಚಿತವಾಗಿ ಇದು ಸವಾಲಿನ ಜವಾಬ್ದಾರಿ. ಕಾಂಗ್ರೆಸ್ ದೊಡ್ಡ ಇತಿಹಾಸ ಹೊಂದಿದ್ದು, ಇಂತಹ ಅನೇಕ ಸೋಲು ನೋಡಿದ್ದೇವೆ. ಪಂಚ ರಾಜ್ಯ ಚುನಾವಣೆಯಲ್ಲಿ ನಾವು ಸೋತಿರಬಹುದು. ಆ ತೀರ್ಪನ್ನು ಒಪ್ಪಿದ್ದೇವೆ. ಈ ಸಮಯದಲ್ಲಿ ನನಗೆ ಜವಾಬ್ದಾರಿ ಸಿಕ್ಕಿದೆ. ನಾನು ಎಲ್ಲರ ಜತೆಗೂಡಿ ರಾಜ್ಯದಲ್ಲಿ 130-140 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರುತ್ತೇವೆ. ನಮಗೆ ಸವಾಲಿದೆ. ಪಂಚರಾಜ್ಯ ಚುನಾವಣೆ ಪರಿಣಾಮ ರಾಜ್ಯದ ಮೇಲೆ ಬೀರುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಮ್ಮ ಗುರಿ ಪಕ್ಷ ಅಧಿಕಾರಕ್ಕೆ ಬರುವುದು. ಇತ್ತೀಚೆಗೆ ಪಂಜಾಬ್ ಹೊರತಾಗಿ ಇನ್ಯಾವುದೇ ಚುನಾವಣೆ ವೇಳೆ ಸಿಎಂ ಅಭ್ಯರ್ಥಿ ಮುಂಚಿತವಾಗಿ ಘೋಷಣೆ ಮಾಡುವುದಿಲ್ಲ' ಎಂದರು.

Recommended Video

      ಹಿಂದೂ & ಮುಸ್ಲಿಂ ಒಟ್ಟಿಗೆ ಬದುಕೋಕೆ ಆಗಲ್ಲ ಅಂತ ಅಂಬೇಡ್ಕರ್ ಅಂದೇ ಹೇಳಿದ್ರು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+