ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ, ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ?

Recommended Video

      ಲಕ್ಷ್ಮಿ ಹೆಬ್ಬಾಳ್ಕರ್ ಸದ್ಯದಲ್ಲೇ ಮಹಿಳಾ ಅಧ್ಯಕ್ಷೆ ಸ್ಥಾನ ಕಳೆದುಕೊಳ್ಳಲಿದ್ದಾರಾ? | Oneindia Kannada

      ಬೆಂಗಳೂರು, ಅಕ್ಟೋಬರ್ 25 : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಿಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ?. ಹೌದು, ಶೀಘ್ರದಲ್ಲಿಯೇ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

      ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದು ಹಳೆಯ ಸುದ್ದಿ. ಕೆಲವು ದಿನಗಳ ಹಿಂದೆಯೂ ಇಂತಹ ಸುದ್ದಿ ಹಬ್ಬಿತ್ತು. ಆಗ ಲೋಕಸಭೆ ಚುನಾವಣೆ ತನಕ ಅವರೇ ಮುಂದುವರೆಯಲಿದ್ದಾರೆ ತಿಳಿದುಬಂದಿತ್ತು.

      ಈಗ ಪಕ್ಷದ ಕೇಂದ್ರ ಮಟ್ಟದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡುವ ಪ್ರಕ್ರಿಯಿಗೆ ಚಾಲನೆ ಸಿಕ್ಕಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಂತರ ಮಹಿಳಾ ಕಾಂಗ್ರೆಸ್ ಸಾರಥ್ಯ ವಹಿಸಿಕೊಳ್ಳುವವರ ಸಂದರ್ಶನ ನಡೆಯುತ್ತಿದೆ.

      ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಸಹೋದರರ ನಡುವಿನ ಅಸಮಾಧಾನದ ಸಮಯದಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬದಲಾವಣೆ ಮಾಡುವ ವಿಚಾರ ಕೇಳಿಬಂದಿತ್ತು. ಈಗ ಅದು ಅಧಿಕೃತವಾಗಿ ಜಾರಿಗೆ ಬರಲಿದೆ...

      ದೆಹಲಿಯಲ್ಲಿ ಸಂದರ್ಶನ

      ದೆಹಲಿಯಲ್ಲಿ ಸಂದರ್ಶನ

      ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬದಲಾವಣೆ ಮಾಡಲಾಗುತ್ತದೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಾರ್ಯ ಆರಂಭವಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸುತ್ತಿದ್ದಾರೆ.

      ಯಾರು ಅಧ್ಯಕ್ಷರಾಗಬಹುದು?

      ಯಾರು ಅಧ್ಯಕ್ಷರಾಗಬಹುದು?

      ಮೈಸೂರು ಮೂಲಕ ಪುಷ್ಪಾ ಅಮರನಾಥ್, ನಾಗಲಕ್ಷ್ಮೀ ಚೌಧರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ, ಗೀತಾ ರಾಜಣ್ಣ ಸೇರಿದಂತೆ 12 ಮಹಿಳಾ ನಾಯಕಿಯರ ಸಂದರ್ಶನ ನಡೆದಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಾಗುತ್ತದೆ? ಎಂಬುದು ಇನ್ನೂ ಖಚಿತವಾಗಿಲ್ಲ.

      ಮುಂದುವರೆಯಲು ಅವಕಾಶ ಕೊಡಿ

      ಮುಂದುವರೆಯಲು ಅವಕಾಶ ಕೊಡಿ

      ಲಕ್ಷ್ಮೀ ಹೆಬ್ಬಾಳ್ಕರ್ ಅವರು 2019ರ ಲೋಕಸಭೆ ಚುನಾವಣೆ ಮುಗಿಯುವ ತನಕ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ಕೊಡಿ ಎಂದು ಹೇಳಿದ್ದಾರೆ. ಆದರೆ, ರಾಷ್ಟ್ರೀಯ ಘಟಕದಿಂದ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಆದ್ದರಿಂದ ಚುನಾವಣೆಗೂ ಮುಂಚೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.

      ಜಾರಕಿಹೊಳಿ ಸಹೋದರರ ಬೇಡಿಕೆ?

      ಜಾರಕಿಹೊಳಿ ಸಹೋದರರ ಬೇಡಿಕೆ?

      ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಸಮಯದಲ್ಲಿ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಅಸಮಾಧಾನ ಉಂಟಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಅವರೇ ಬೇಡಿಕೆ ಇಟ್ಟಿದ್ದಾರೆಯೇ? ಎಂದು ಕಾದು ನೋಡಬೇಕಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+