ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕೆಪಿಸಿಸಿ ಅಧ್ಯಕ್ಷ ಚುನಾವಣೆ, ಒಂದು ಸಾಲಿನ ನಿರ್ಣಯ ಮಂಡನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡನೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಲಾಗುತ್ತದೆ.

ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಚುನಾವಣಾಧಿಕಾರಿ ನಾಚಿಯಪ್ಪನ್ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಹಾಲಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒಂದು ಸಾಲಿನ ನಿರ್ಣಯ ಮಂಡಿಸಿದರು.

KPCC President Election : ಇಂದು ಕೆಪಿಸಿಸಿ ಅಧ್ಯಕ್ಷ ಚುನಾವಣೆ, ಡಿಕೆಶಿ ಮರು ಆಯ್ಕೆ?KPCC President Election : ಇಂದು ಕೆಪಿಸಿಸಿ ಅಧ್ಯಕ್ಷ ಚುನಾವಣೆ, ಡಿಕೆಶಿ ಮರು ಆಯ್ಕೆ?

New President To KPCC Sonia Gandhi To Take Final Decision

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರು ಒಂದು ಸಾಲಿನ ನಿರ್ಣಯ ಅನುಮೋದಿಸಿದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಹೆಸರನ್ನು ಮುಚ್ಚಿದ ಲಕೋಟೆಯಲ್ಲಿ ದೆಹಲಿಗೆ ಕಳಿಸಲಾಗುತ್ತದೆ.

Breaking: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್- ಡಿಕೆ ಶಿವಕುಮಾರ್ ಬೇಸರ Breaking: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್- ಡಿಕೆ ಶಿವಕುಮಾರ್ ಬೇಸರ

New President To KPCC Sonia Gandhi To Take Final Decision

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ತೀರ್ಮಾನ ಕೈಗೊಳ್ಳುವ ಪರಮಾಧಿಕಾರವನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ನೀಡಿ ಒಂದು ಸಾಲಿನ ನಿರ್ಣಯವನ್ನು ಚುನಾವಣಾಧಿಕಾರಿ ನಾಚಿಯಪ್ಪನ್ ಸಮ್ಮುಖದಲ್ಲಿ ಕೈಗೊಳ್ಳಲಾಗಿದೆ.

ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್‌ ಗಾಂಧಿಯವರನ್ನು ಒತ್ತಾಯಿಸುತ್ತೇವೆ: ಮಲ್ಲಿಕಾರ್ಜುನ್‌ ಖರ್ಗೆ ಎಐಸಿಸಿ ಅಧ್ಯಕ್ಷರಾಗುವಂತೆ ರಾಹುಲ್‌ ಗಾಂಧಿಯವರನ್ನು ಒತ್ತಾಯಿಸುತ್ತೇವೆ: ಮಲ್ಲಿಕಾರ್ಜುನ್‌ ಖರ್ಗೆ

ಕೆಪಿಸಿಸಿಯ ಹಾಲಿ ಅಧ್ಯಕ್ಷರಾಗಿರುವ ಡಿ. ಕೆ. ಶಿವಕುಮಾರ್ ಮತ್ತೆ ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಅದರಲ್ಲೂ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಸೋನಿಯಾ ಗಾಂಧಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಚುನಾವಣೆ ಹತ್ತಿರವಿದೆ; ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಮುಂದಿಟ್ಟುಕೊಂಡು ಪಕ್ಷ ಅಧ್ಯಕ್ಷರನ್ನು ಬದಲಾವಣೆ ಮಾಡುವುದಿಲ್ಲ. ಆದ್ದರಿಂದ ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಆದರೆ, ಈ ಕುರಿತು ಅಧಿಕೃತ ಘೋಷಣೆಯಾಗಬೇಕಿದೆ.

ಕಾಂಗ್ರೆಸ್ ನಿಯಮಗಳ ಪ್ರಕಾರ ಕೆಪಿಸಿಸಿ ಅಧ್ಯಕ್ಷರ ಅವಧಿ ಮೂರು ವರ್ಷಗಳು. ಆದರೆ ಡಿ. ಕೆ. ಶಿವಕುಮಾರ್ ಅಧ್ಯಕ್ಷರಾಗಿ ಎರಡು ವರ್ಷಗಳು ಮಾತ್ರ ಕಳೆದಿವೆ. ಈಗ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತಿರುವುದರಿಂದ ಪ್ರದೇಶ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ಸಹ ಚುನಾವಣೆ ನಡೆಸಲಾಗುತ್ತಿದೆ.

English summary
One line resolution taken in the Karnataka Pradesh Congress Committee (KPCC) election. Sonia Gandhi to take final decision on elect of new president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X