Get Updates
Get notified of breaking news, exclusive insights, and must-see stories!

C-Section Delivery: 'ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ'

ಬೆಳಗಾವಿ, ಡಿಸೆಂಬರ್‌ 16: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು (ಸೋಮವಾರ) ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ 46% ಇದೆ.

New Program To Be Implemented To Curb Cesarean Deliveries Says Dinesh Gundu Rao

ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್ ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ‌ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದರು.

ರಾಜ್ಯದಲ್ಲಿ ಅನಗತ್ಯ ಸಿಜೇರಿಯನ್ ಹೆರಿಗೆ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು 24X7 ಪ್ರಸೂತಿ ಸೇವೆಗಳನ್ನು ನೀಡಲು ಬಲಪಡಿಸಲಾಗುತ್ತಿದೆ. ರಾತ್ರಿ ವೇಳೆಯಲ್ಲಿ ಸಹಜ ಹರಿಗೆಗಳನ್ನು ಮತ್ತು ಅವಶ್ಯವಿದ್ದಲ್ಲಿ, ಸಿಜೇರಿಯನ್ ಶಸ್ತ್ರಚಿಕಿತ್ಸೆ ನಡೆಸಲು ಅನುಕೂಲವಾಗುತ್ತಿದೆ, ಈ ಕ್ರಮದಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಶಿಫಾರಸ್ಸುಗೊಳ್ಳುವ ಸಂಖ್ಯೆಯು ಕಡಿಮೆ ಆಗಲಿದ್ದು ಅನಗತ್ಯ ಸಿಜೇರಿಯನ್ ಶಸ್ತ್ರಚಿಕಿತ್ಸೆಗೆ ಕಡಿವಾಣ ಹಾಕಲಾಗುತ್ತಿದೆ ಎಂದರು.

ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದ್ದು, ಇದುವರೆಗೂ, 88 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಮಂಜೂರಾಗಿದ್ದು ಅದರಲ್ಲಿ 60 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿರುತ್ತವೆ. 24X7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಿಬ್ಬಂದಿಯು ಮತ್ತು ನುರಿತ ತಾಯಿ ಮತ್ತು ಮಕ್ಕಳ ತಜ್ಞರು ಇರುವುದರಿಂದ 24X7 ಸಹಜ ಹರಿಗೆ ನಡೆಸಲು ಉತ್ತೇಜಿಸಲಾಗುತ್ತಿದೆ

ಸಹಜ ಹೆರಿಗೆಗಳನ್ನು ಹೆಚ್ಚಿಸಲು ಹಾಗೂ ಸಿಜೇರಿಯನ್ ಶಸ್ತ್ರಚಿಕಿತ್ಸೆ ಕಡಿಮೆ ಮಾಡಲು Midwifery ಯೋಜನೆಯನ್ನು ಪ್ರಾರಂಭಿಸಲಾಗಿದೆ ಈ ಯೋಜನೆಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು Midwifery ಯೋಜನೆಯಲ್ಲಿ ಪಡೆದು MLCU ಹರಿಗೆ ಕೋಣೆಯಲ್ಲಿ ಸಹಜ ಹೆರಿಗೆಗಳನ್ನು ನೆರವೇರಿಸಲು ತಜ್ಞತೆಯನ್ನು ಹೊಂದಿರುತ್ತಾರೆ. ಪ್ರಸ್ತುತ ತರಬೇತುದಾರರ ತರಬೇತಿಯನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮತ್ತು ಹೈದರಬಾದಿನ Fernandez Foundation ನಲ್ಲಿ ಪೂರ್ಣಗೊಳಿಸಿ ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು ನೀಡುತ್ತಿದ್ದಾರೆ.

ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ 1830 ಶುಶ್ರೂಷಾಧಿಕಾರಿಗಳ ತರಬೇತಿಯಲ್ಲಿ 12 ತಿಂಗಳು ಪೂರ್ಣಗೊಂಡಿದ್ದು ಇನ್ನು 6 ತಿಂಗಳಲ್ಲಿ ತರಬೇತಿ ಮುಗಿಯಲಿದ್ದು ಜುಲೈ-2025 ರಿಂದ ಹಾಸನ, ಮಂಡ್ಯ ಮತ್ತು ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ MLCU ಕಾರ್ಯಾರಂಭ ಮಾಡಲಿದೆ.

ಬೆಂಗಳೂರಿನಲ್ಲಿ ವಾಣಿ ವಿಲಾಸ ಆಸ್ಪತ್ರೆ ಯಲ್ಲಿ ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 25 ಶುಶ್ರೂಷಾಧಿಕಾರಿಗಳು NPM ತರಬೇತಿಯನ್ನು ಜುಲೈ-2024 ರಲ್ಲಿ ಪ್ರಾರಂಭಿಸಲಾಗಿದ್ದು, ಡಿಸೆಂಬರ್ 2025 ರ ವರೆಗೆ 18 ತಿಂಗಳ ತರಬೇತಿಯು ಮುಗಿಯಲಿದ್ದು ತದ ನಂತರ ಕೋಲಾರ, ಬೆಂಗಳೂರು, ದಾವಣಗೆರೆ ಮತ್ತು ತುಮಕೂರು ಜಿಲ್ಲಾ ಆಸ್ಪತ್ರೆಗಳಲ್ಲಿ MLCU ಪ್ರಾರಂಭಗೊಳ್ಳುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ 18 ತಿಂಗಳ ತರಬೇತಿ ಪ್ರಾರಂಭಿಸಲಾಗಿದ್ದು ಒಟ್ಟು 24 ಶುಶ್ರೂಷಾಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ತದನಂತರ ಬೆಳಗಾವಿ, ಹುಬ್ಬಳ್ಳಿ ಮತ್ತು ಗಂಗಾವತಿ ಯಲ್ಲಿ MLCU ಪ್ರಾರಂಭಗೊಳ್ಳಲಿದೆ.

ಪ್ರತೀ ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆಯ ಕಡಿವಾಣ ಹಾಕಲು ಸಿಜೇರಿಯನ್ ಆಡಿಟ್ ಅಸ್ಪತ್ರೆಯಲ್ಲಿ ಮಾಡಲಾಗುತ್ತಿದೆ. ಈ ಆಡಿಟ್ ನಿಂದ ಪ್ರತಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಅಗತ್ಯತೆ ಹಾಗು ಅನಗತ್ಯತೆ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ತಡೆಗಟ್ಟಲು ಕ್ರಮವಹಿಸಲಾಗುತ್ತಿದೆ ಎಂದರು.

ಪ್ರತಿ ತಿಂಗಳು ಸಿಜೇರಿಯನ್ ಶಸ್ತ್ರಚಿಕಿತ್ಸೆಯ ಅನಗತ್ಯ ಶಸ್ತ್ರಚಿಕಿತ್ಸೆ ತಡೆಯಲು ಜಿಲ್ಲಾ ಮಟ್ಟದಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಸೂತಿ ತಜ್ಞರುಗಳಿಗೆ ಮತ್ತು ಶುಶ್ರೂಷಕರುಗಳಿಗೆ ಹೆರಿಗೆ ಸಮಯದಲ್ಲಿನ ಆರೈಕೆ ಮತ್ತು ಪ್ರಸವದ ನಂತರದ ಆರೈಕೆಗೆ ಸಂಬಂಧಿಸಿದ ಕೌಶಲವನ್ನು ಹೆಚ್ಚಿಸಲು 3 ದಿನಗಳ ದಕ್ಷತಾ ತರಬೇತಿಯನ್ನು 2018 ರಿಂದ ನೀಡಲಾಗುತ್ತಿದೆ. ಇದರಿಂದ ಸಿಜೇರಿಯನ್ ಶಸ್ತ್ರಚಿಕಿತ್ಸೆ ಯನ್ನು ನಿಯಂತ್ರಿಸಲು ಸಹಾಯವಾಗುತ್ತಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+