ಹೋಬಳಿ ಮಟ್ಟದಲ್ಲಿ 20 ಹೊಸ ವಸತಿ ಶಾಲೆಗಳು ಆರಂಭ, ಷರತ್ತುಗಳು

ಬೆಂಗಳೂರು, ಅಕ್ಟೋಬರ್ 05: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಹೋಬಳಿ ಮಟ್ಟದಲ್ಲಿ ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಯಾವ ತಾಲೂಕಿನ ಯಾವ ಹೋಬಳಿಯಲ್ಲಿ ಶಾಲೆಗಳನ್ನು ಆರಂಭಿಸಬೇಕು ಎಂದು ಮಾಹಿತಿಯನ್ನು ನೀಡಲಾಗಿದೆ. ಶಾಲೆಗಳನ್ನು ಆರಂಭಿಸಲು ಇರುವ ಷರತ್ತುಗಳನ್ನು ಸಹ ಉಲ್ಲೇಖಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಈ ಬಗ್ಗೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಸುಮಿತ್ರ, ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. 2024-25ನೇ ಸಾಲಿನ ಆಯವ್ಯಯ ಕಂಡಿಕೆ-163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ, 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

New Residential Schools To Open In Karnataka Hobli Level

ಆದೇಶದ ವಿವರಗಳು: 2024-25ನೇ ಸಾಲಿನ ಆಯವ್ಯಯದ ಕಂಡಿಕೆ-163 ರಲ್ಲಿ ಘೋಷಿಸಿರುವಂತೆ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ 20 ಹೊಸ ವಸತಿ ಶಾಲೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು ಅನುಮೋದನೆ ನೀಡಿ ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯದ 31 ಜಿಲ್ಲೆ 231 ತಾಲ್ಲೂಕಿನ 770 ಹೋಬಳಿಗಳ ಪೈಕಿ ಪರಿಶಿಷ್ಟ ಜಾತಿಯ-503, ಪರಿಶಿಷ್ಟ ವರ್ಗ-144 ಹಾಗೂ ಹಿಂದುಳಿದ ವರ್ಗ-174 ವಸತಿ ಶಾಲೆಗಳು ಒಟ್ಟು 821 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.

2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರದ ಆದೇಶ ದಿನಾಂಕ 24.06.2024ರಲ್ಲಿ ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ. ಸದರಿ ಆದೇಶದಲ್ಲಿನ 20 ಶಾಲೆಗಳನ್ನು ವಿಧಾನಸಭಾ ಕ್ಷೇತ್ರವಾರು ಪ್ರತಿ ಹೋಬಳಿಯಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಲು ಒಟ್ಟಾರೆ ಹೋಬಳಿಗಳ ಸಂಖ್ಯೆಯಷ್ಟು ವಸತಿ ಶಾಲೆಗಳನ್ನು ಪರಿಗಣಿಸಲಾಗಿದ್ದು, ಅದರಂತೆ ವಿಧಾನಸಭಾ ಕ್ಷೇತ್ರವಾರು ಒಟ್ಟಾರೆ ಹೋಬಳಿ ಸಂಖ್ಯೆಯಲ್ಲಿ ಹೋಬಳಿಗಳ ಸಂಖ್ಯೆಗಿಂತ ಕಡಿಮೆ ವಸತಿ ಶಾಲೆಗಳು ಇರುವ ವಿಧಾನಸಭಾ ಕ್ಷೇತ್ರಗಳಲ್ಲಿನ ಹೋಬಳಿಗಳಲ್ಲಿ ಹೊಸದಾಗಿ ವಸತಿ ಶಾಲೆಗಳನ್ನು ಪ್ರಾರಂಭಿಸಬೇಕಾಗಿರುತ್ತದೆ.

ಅದರಂತೆ, ವಿಧಾನಸಭಾ ಕ್ಷೇತ್ರದ ಹೋಬಳಿಗಳ ಸಂಖ್ಯೆಗಳಿಗನುಗುಣವಾಗಿ ಒಟ್ಟು ಶಾಲೆಗಳನ್ನು ಪರಿಗಣಿಸಿದಾಗ 21 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ. ಆದುದರಿಂದ, 21 ಹೋಬಳಿಗಳಲ್ಲಿನ 20 ಹೋಬಳಿಗಳಲ್ಲಿ ವಸತಿ ಶಾಲೆಗಳನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಈಗಾಗಲೇ ಆದೇಶವನ್ನು ಹೊರಡಿಸಲಾಗಿರುವ ಪಟ್ಟಿಯಲ್ಲಿನ ವಸತಿ ಶಾಲೆಗಳು ವಿಧಾನಸಭಾ ಕ್ಷೇತ್ರವಾರು ಒಟ್ಟಾರೆ ಹೋಬಳಿಗಳಲ್ಲಿನ ಸಂಖ್ಯೆಯಷ್ಟು ಶಾಲೆಗಳು ಈಗಾಗಲೇ ಸದರಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಇರುವುದರಿಂದ ಮತ್ತು ಸದರಿ ವಿಧಾನಸಭಾ ಕ್ಷೇತ್ರಗಳಿಗೆ ವಸತಿ ಶಾಲೆಗಳು ಹೆಚ್ಚುವರಿಯಾಗುವುದರಿಂದ ಪ್ರಸ್ತುತ ಆಯ್ಕೆ ಮಾಡಲಾಗಿರುವ ಹೋಬಳಿಗಳಲ್ಲಿ ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಬೇಕಾಗಿರುತ್ತದೆ.

ಅದರಂತೆ, 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು ಪ್ರಾರಂಭಿಸಲು ಪರಿಷ್ಕೃತ ಪಟ್ಟಿಯನ್ನು ಸಲ್ಲಿಸಿ, ಪರಿಷ್ಕೃತ ಪ್ರಸ್ತಾವನೆಗೆ ಆದೇಶ ಕೋರಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದು ವಿವರಿಸಿದೆ. ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲಿಸಿ, ಈ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶ ದಿನಾಂಕ 24.06.2024ರ ಆದೇಶವನ್ನು ಹಿಂಪಡೆದು, 2024-25ನೇ ಸಾಲಿನ ಆಯವ್ಯಯದ ಕಂಡಿಕೆ-163 ರಲ್ಲಿ ಘೋಷಿಸಿರುವಂತೆ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಿಗೆ 20 ಹೊಸ ವಸತಿ ಶಾಲೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು ಷರತ್ತಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳು

* ಸದರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಹುದ್ದೆಗಳ ಸೃಜನೆ/ ಆವರ್ತಕ/ ಅನಾವರ್ತಕ ವೆಚ್ಚದ ಸಂಪೂರ್ಣ ಮಾಹಿತಿಯೊಂದಿಗೆ ಸಹಮತಿಯನ್ನು ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.

* ಸದರಿ ಕಾರ್ಯಕ್ರಮಗಳನ್ನು ಮಾರ್ಗಸೂಚಿಯನ್ವಯ, ಪಾರದರ್ಶಕತೆಯಿಂದ ನಿಯಮಾನುಸಾರ ಅನುಷ್ಠಾನಗೊಳಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+