ಕಲಾಪದ ಸಮಯ ಉಳಿಸಲು ನಿಯಮಾವಳಿಗೆ ತಿದ್ದುಪಡಿ
ಬೆಂಗಳೂರು, ಆಗಸ್ಟ್ 30 : ಒಂದು ದಿನದ ವಿಧಾನಸಭೆ ಕಲಾಪಕ್ಕೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಆದರೆ, ಕೆಲವೊಮ್ಮೆ ಒಂದು ಗಂಟೆಯೂ ಕಲಾಪ ನಡೆಯುವುದಿಲ್ಲ. ಆದ್ದರಿಂದ, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ನಿಯಮಾವಳಿಗಳಿಗೆ ತಿದ್ದುಪಡಿ ತರಲಾಗುತ್ತದೆ.
ಸೋಮವಾರ ವಿಧಾನಸೌಧದಲ್ಲಿ ವಿಧಾನ ಮಂಡಲ ಜಂಟಿ ಸದನ ಸಮಿತಿ ಮೊದಲ ಸಭೆ ನಡೆಯಿತು. ಸ್ಪೀಕರ್ ಕೆ.ಬಿ. ಕೋಳಿವಾಡ ಮತ್ತು ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಜಂಟಿ ಸದನ ಸಮಿತಿ ಅಧ್ಯಕ್ಷರಾಗಿದ್ದಾರೆ.[12 ದಿನ ಮೊದಲೇ ಪರಿಷತ್ ಕಲಾಪ ಮುಕ್ತಾಯ]

ಸಭೆಯ ಬಳಿಕ ಮಾತನಾಡಿದ ಕೆ.ಬಿ.ಕೋಳಿವಾಡ ಅವರು, 'ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರಶ್ನೋತ್ತರ, ಶೂನ್ಯವೇಳೆ, ಗಮನ ಸೆಳೆಯುವ ಸೂಚನೆ ಮೇಲೆ ಚರ್ಚೆ ನಡೆಯಬೇಕು. ಬಳಿಕ ನಿಲುವಳಿ ಸೂಚನೆ ಮಂಡನೆ ಮಾಡಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ' ಎಂದರು.[ಸದನದ ಅಹೋರಾತ್ರಿ ಧರಣಿ: ಮಟನ್ ನಿಂದ ಅನ್ನಾಸಾಂಬರ್ ವರೆಗೆ]
'ಕಲಾಪಕ್ಕೆ ಒಂದು ಗಂಟೆ ಮೊದಲು ನಿಲುವಳಿ ಸೂಚನೆ ಮಂಡಿಸಲು ಅನುಮತಿ ಕೋರಬೇಕು ಎಂಬ ನಿಯಮವನ್ನು ಮಧ್ಯಾಹ್ನ 2ರ ಬಳಿಕ ನಿಲುವಳಿ ಸೂಚನೆ ಮಂಡನೆ ಮಾಡಲು ಅವಕಾಶ ನೀಡಬೇಕು' ಎಂದು ಬದಲಾವಣೆ ಮಾಡಲಾಗುತ್ತದೆ ಎಂದು ಕೋಳಿವಾಡ ಅವರು ಹೇಳಿದರು.[ಗದ್ದಲದ ನಡುವೆಯೇ ಪರಿಷತ್ತಿನಲ್ಲಿ 3 ವಿಧೇಯಕಗಳಿಗೆ ಒಪ್ಪಿಗೆ]
'ಬೆಳಗಾವಿಯಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಅಧಿವೇಶನದ ಮೊದಲ ದಿನ ವರದಿ ಮಂಡನೆ ಮಾಡಿ, ಅನುಮೋದನೆ ಪಡೆಯಲಾಗುತ್ತದೆ. ಈ ಅಧಿವೇಶನದಲ್ಲಿಯೇ ಹೊಸ ನಿಯಮಗಳಂತೆ ಕಲಾಪ ನಡೆಸಲಾಗುತ್ತದೆ' ಎಂದು ಕೋಳಿವಾಡ ಅವರು ಹೇಳಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications