Get Updates
Get notified of breaking news, exclusive insights, and must-see stories!

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿ

ಬೆಂಗಳೂರು, ಜನವರಿ17: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ತಿಳಿಸಿದ್ದಾರೆ.

ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪುರ ಅವರು ತಿಳಿಸಿದ್ದಾರೆ.

New Rules Have Been Formulated For Transfers In The Excise Department RB Timmapur

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ(ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪುರ ಅವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ಆರ್ ಬಿ ತಿಮ್ಮಾಪುರ ತಿಳಿಸಿದ್ದಾರೆ.

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಾಗರಿಕರಿಗೆ ಹೆಚ್ಚಿನ ಆರೋಗ್ಯ ಸೇವೆಗಳು

ಬ್ರಾಂಡ್‍ ಬೆಂಗಳೂರು ಯೋಜನೆಯಡಿಯಲ್ಲಿ ಬೃಹತ್‍ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಆಸ್ಪತ್ರೆಗಳನ್ನು 413.71 ಕೋಟಿಗಳ ಅಂದಾಜು ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಆರ್ ಐ. ಡಿಎಫ್‍ -ಟ್ರಾಂಚ್‍ 30 ರಡಿ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ 15 ಮೆಟ್ರಿಕ್‍ ನಂತರದ ವಿದ್ಯಾರ್ಥಿಗಳ ಕಟ್ಟಡ ಕಾಮಗಾರಿಗಳನ್ನು 75.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಕೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ.

ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ 100 ಹಾಶಿಗೆ ಸಾಮರ್ಥ್ಯದ ನ್ಯೂರಾಲಜಿ ಮತ್ತು ನ್ಯೂರೋಸರ್ಜರಿ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿಗಳ ಒಟ್ಟು 33.77 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+