ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ
ಬೆಂಗಳೂರು, ಆಗಸ್ಟ್ 19 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಸಾಮಾಜಿಕ ಪರಿವರ್ತನೆಯ ತುಡಿತದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮಶತಮಾನೋತ್ಸವ ವರ್ಷದ ಸಮಾರೋಪದ ಸವಿ ನೆನಪಿಗಾಗಿ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ಬಂಪರ್ ಕೊಡುಗೆಗಳನ್ನು ನೀಡಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರಗಳನ್ನು ನೀಡಿದರು. ರಾಜ್ಯದ ಎಲ್ಲಾ 2408 ಹಿಂದುಳಿದ ವರ್ಗದ ವಿದ್ಯಾರ್ಥಿನಿಲಯಗಳನ್ನು ಡಿ. ದೇವರಾಜ ಅರಸು ವಿದ್ಯಾರ್ಥಿನಿಲಯ ಎಂದು ನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.[ಚಿತ್ರಗಳು : ಕಲಬುರಗಿಯಲ್ಲಿ ದೇವರಾಜ ಅರಸು ರಥಯಾತ್ರೆ]

ಹಿಂದುಳಿದ ವರ್ಗದ ಆಯ್ದ 600 ಪಿಎಚ್‌ಡಿ ವಿದ್ಯಾರ್ಥಿಗಳಿಗಾಗಿ ಮಾಸಿಕ 500 ರೂ. ಶಿಷ್ಯವೇತನ ನೀಡುವ ಮೂಲಕ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ಪ್ರತಿಭಾವಂತ ಹಿಂದುಳಿದ ವರ್ಗದ ಪದವಿ/ಸ್ನಾತಕೋತ್ತರ 2500 ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ಅಡಿಯಲ್ಲಿ 10 ಸಾವಿರ ರೂ. ದಿಂದ 25 ಸಾವಿರ ರೂ.ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.
ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಆರಂಭಿಸಿದ್ದು ಪ್ರಸಕ್ತ ಸಾಲಿನಲ್ಲಿ 99 ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತಲಾ ಗರಿಷ್ಠ 10 ಲಕ್ಷ ರೂ. ನೀಡಲಾಗಿದೆ.[ಅರಸು ಹುಟ್ಟೂರನ್ನು ದತ್ತು ಪಡೆದ ಸರ್ಕಾರ]
ದೇವರಾಜ ಅರಸು ಪ್ರಶಸ್ತಿ : ಕರ್ನಾಟಕ ಸರ್ಕಾರ ನೀಡುವ ಡಿ. ದೇವರಾಜ ಅರಸು 2016ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗಾಗಿ ಮಂಗಳೂರಿನ ಮಾಜಿ ಸಚಿವ ಬಿ.ಎ ಮೋಹಿದ್ದೀನ್ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಕೃಷಿಕರಾಗಿರುವ ಮೊಹಿದ್ದೀನ್ ಅವರು ಬಿಎಸ್‌ಸಿ ಮತ್ತು ಡಿಪ್ಲೋಮ ಪದವೀಧರರಾಗಿದ್ದು, ಗೋವಿಂದೇಗೌಡರೊಂದಿಗೆ ಸೇರಿ ಭೂ ರಹಿತರಿಗೆ ಭೂಮಿ ಒದಗಿಸುವ ಕಾರ್ಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು.
1978ರ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಮೊದಲ ಭಾರಿಗೆ ಆಯ್ಕೆಯಾಗಿದ್ದ ಇವರು 1996 ರಲ್ಲಿ ಜೆ.ಎಚ್.ಪಟೇಲ್ ಮಂತ್ರಿ ಮಂಡಲದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಎರಡೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications