ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ನೂತನ ಪುರಸಭೆ, ನಗರಸಭೆಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಡಿ. 26 : ಕರ್ನಾಟಕದ 10 ಪಟ್ಟಣ ಪಂಚಾಯಿತಿಗಳನ್ನು ಪುರಸಭೆಯಾಗಿ ಮತ್ತು 9 ಪುರಸಭೆಗಳನ್ನು ನಗರಸಭೆಗಳಾಗಿ ಮೇಲ್ದರ್ಜೆಗೇರಿಸಿ ಪೌರಾಡಳಿತ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸರ್ಕಾರ ಹಿಂದೆಯೇ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಪ್ರಕಟಿಸಿತ್ತು, ಆಕ್ಷೇಪಣೆ ಬರದ ಹಿನ್ನಲೆಯಲ್ಲಿ ಅಂತಿಮ ಅಧಿಸೂಚನೆ ಹೊರಬಿದ್ದಿದೆ.

ಪಟ್ಟಣ ಪಂಚಾಯಿತಿ ಮತ್ತು ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಸರ್ಕಾರ ಹಿಂದೆಯೇ ಪ್ರಕಟಣೆ ಹೊರಡಿಸಿತ್ತು. ರಾಜ್ಯಪತ್ರ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಆದರೆ, ಯಾವುದೇ ಆಕ್ಷೇಪಣೆ ಬಾರದ ಹಿನ್ನೆಲೆಯಲ್ಲಿ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ.

Karnataka Government

ನೂತನ ಪುರಸಭೆಗಳು : ಕಲಬುರಗಿ ಜಿಲ್ಲೆಯ ಅಫ್ಜಲ್ಪುರ, ಜೇವರ್ಗಿ, ಚಿಂಚೋಳಿ, ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್, ಬಾಗಲಕೋಟೆ ಜಿಲ್ಲೆಯ ಹುನಗುಂದ, ಬೆಳಗಾವಿ ಜಿಲ್ಲೆಯ ಕುಡಚಿ, ಹುಕ್ಕೇರಿ, ಸದಲಗ, ಮಂಡ್ಯ ಜಿಲ್ಲೆಯ ಪಾಂಡವಪುರ, ಮೈಸೂರು ಜಿಲ್ಲೆಯ ಟಿ.ನರಸೀಪುರ. [ಮಂಡ್ಯ ನಗರಕ್ಕೆ 24 ಗಂಟೆ ಕುಡಿಯುವ ನೀರು]

ನೂತನ ನಗರಸಭೆಗಳು : ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ರಾಮನಗರ ಜಿಲ್ಲೆಯ ಕನಕಪುರ, ಬಾಗಲಕೋಟೆ ಜಿಲ್ಲೆಯ ಮುಧೋಳ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ, ಯಾದಗಿರಿ ಜಿಲ್ಲೆಯ ಸುರಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ.

English summary
Karnataka government approved for upgrade 10 Town Panchayath to Town Municipal Council and 5 Town Municipal Council to City council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X