Get Updates
Get notified of breaking news, exclusive insights, and must-see stories!

ಪಂಚಮಸಾಲಿ 2ಎಗೆ ಸೇರ್ಪಡೆ ವಿವಾದಕ್ಕೆ ಹೊಸ ತಿರುವು: ಮೀಸಲಾತಿ ವಿಳಂಬ?

ಬೆಂಗಳೂರು,ಆ.19. ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎಗೆ ಸೇರ್ಪಡೆ ಮಾಡಬೇಕೆಂಬ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಅವರ ಬೇಡಿಕೆಯನ್ನು ಪರಿಗಣಿಸಿ ಮುಂದಿನ‌ ಕ್ರಮ ಜರುಗಿಸಲು ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ವಿವಾದ ಬಗೆಹರಿಸುವುದು ಇನ್ನಷ್ಟು ವಿಳಂಬವಾಗಲಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ಕುರಿತ‌ ಮುಂದಿನ ಆದೇಶದವರೆಗೆ ಪ್ರಕರಣದಲ್ಲಿ‌ ಮುಂದುವರಿಯದಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ನಿರ್ದೇಶಿಸಿಸಿದೆ.

ಅಲ್ಲದೆ, ಅರ್ಜಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲು ಅರ್ಜಿದಾರರರಿಗೆ ಸೂಚಿಸಿದ ನ್ಯಾಯಪೀಠವು ವಿಚಾರಣೆ ಆ.24ಕ್ಕೆ ಮುಂದೂಡಿದೆ. ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ಸಮಿತಿಯ ಕಾರ್ಯ ನಿರ್ವಹಣೆಗೆ ನಿರ್ಬಂಧ ವಿಧಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

 New twist to inclusion of Panchamasali into 2 A category


ಪಂಚಮಸಾಲಿ ಉಪ ಪಂಗಡವನ್ನು 3ಬಿ ವಿಭಾಗದಿಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿತ್ತು.

ಮಕ್ಕಳನ್ನು ಹಾಜರುಪಡಿಸಿದ ಪೊಲೀಸರು:

ನಗರದಲ್ಲಿನ ಗಂಡನ ಮನೆ ತೊರೆದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನೆಲೆಸಿದ್ದ ಮಹಿಳೆಯ ಸುಪರ್ದಿಯಲ್ಲಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಹೈಕೋರ್ಟ್ ಮುಂದೆ ಹಾಜರುಪಡಿಸುವಲ್ಲಿ ನಗರದ ಮಾರತ್‌ಹಳ್ಳಿ ಠಾಣಾ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಪತ್ನಿ ಸೀತಾ ತನ್ನ ಅಪ್ರಾಪ್ತ ಹೆಣ್ಣು ಮಕ್ಕಳಿಬ್ಬರನ್ನು ಅಕ್ರಮವಾಗಿ ಕರೆದೊಯ್ದು ನಾಸಿಕ್‌ನಲ್ಲಿ ನೆಲೆಸಿದ್ದಾರೆ. ಮಕ್ಕಳನ್ನು ನೋಡಲು ಅವಕಾಶ ನೀಡುತ್ತಿಲ್ಲ ಎಂದು ಕರಿಯಮ್ಮನ ಅಗ್ರಹಾರ ಬಡಾವಣೆಯ ನಿವಾಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ವೀರಪ್ಪ ಅವರಿದ್ದ ನ್ಯಾಯಪೀಠ ಆಲಿಸಿತು.

ಹೈಕೋರ್ಟ್ ಹಲವು ಬಾರಿ ಸೂಚನೆ ನೀಡಿ ಸಾಕಷ್ಟು ಕಾಲಾವಕಾಶ ಕಲ್ಪಿಸಿದ್ದರೂ ಮತ್ತು ನಾಸಿಕ್ ಪೊಲೀಸರ ಮೂಲಕ ಸಮನ್ಸ್ ಜಾರಿ ಮಾಡಿದ್ದರೂ ತಾಯಿ ಮಾತ್ರ ಮಕ್ಕಳನ್ನು ಕೋರ್ಟ್‌ಗೆ ಹಾಜರುಪಡಿಸಿಲ್ಲ. ಸಾಲದೆ, ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದೇನೆ ಎಂದು ಸುಳ್ಳು ಮಾಹಿತಿ ನೀಡಿ ಹೈಕೋರ್ಟ್‌ಗೆ ದಿಕ್ಕು ತಪ್ಪಿಸಿದ್ದು ಒಂದೆಡೆಯಾದರೆ, ಶಾಲೆಯಲ್ಲಿ ಪೋಷಕರ ಸಭೆಗೆ ಹಾಜರಾಗಬೇಕಾದ ಕಾರಣ ನ್ಯಾಯಾಲಯಕ್ಕೆ ಬರಲಾಗದು ಎಂದು ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ ಕೋರ್ಟ್ ಆದೇಶವನ್ನು ಧಿಕ್ಕರಿಸಿದ್ದು ಮತ್ತೊಂದೆಡೆ.

ಮಹಿಳೆಯ ಈ ನಡೆಯಿಂದ ಬೇಸತ್ತ ಹೈಕೋರ್ಟ್, ನಾಸಿಕ್ ಪೊಲೀಸ್ ಆಯುಕ್ತರ ಮೂಲಕ ಆ.೧೮ರಂದು ಮಗು ಮತ್ತು ತಾಯಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ರಾಜ್ಯ ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತರು, ಮಾರತಹಳ್ಳಿ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಮತ್ತು ವೈಟ್ ಫೀಲ್ಡ್ ವಿಭಾಗದ ಆಯುಕ್ತರಿಗೆ ಆ.4ರಂದು ತಾಕೀತು ಮಾಡಿತ್ತು.

ಹೈಕೋರ್ಟ್ ಸೂಚನೆಯಂತೆ ನಾಸಿಕ್‌ಗೆ ತೆರಳಿದ ಮಾರತಹಳ್ಳಿ ಠಾಣಾ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ಸೀತಾ ಮತ್ತವರ ಮಕ್ಕಳನ್ನು ಭೇಟಿ ಮಾಡಿದ್ದರು. ನಂತರ ಹೈಕೋರ್ಟ್ ಆದೇಶದ ಮಾಹಿತಿ ನೀಡಿ, ಮಕ್ಕಳೊಂದಿಗೆ ಕೋರ್ಟ್‌ಗೆ ಹಾಜರಾಗುವಂತೆ ಸೀತಾರಿಗೆ ಸೂಚಿಸಿದ್ದರು. ಅಂತಿಮವಾಗಿ ನಡೆದ ವಿಚಾರಣೆ ವೇಳೆ ಇಬ್ಬರು ಹೆಣ್ಣು ಮಕ್ಕಳನ್ನೂ ಹೈಕೋರ್ಟ್‌ಗೆ ಹಾಜರುಪಡಿಸಿದರು. ತಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+