ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

NDA ಮೈತ್ರಿಕೂಟಕ್ಕೆ ಜೆಡಿಎಸ್, ಕೇಂದ್ರ ಕ್ಯಾಬಿನೆಟ್ ಸಚಿವರಾಗಿ ಕುಮಾರಸ್ವಾಮಿ? ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಡಿ 3: ಜಾತ್ಯಾತೀತ ಜನತಾದಳ ಬಿಜೆಪಿ ಜೊತೆ ವಿಲೀನಗೊಳ್ಳಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಜೆಡಿಎಸ್ ಮುಖಂಡರು ಸ್ಪಷ್ಟನೆಯನ್ನು ನೀಡಿದ್ದರು. ಈಗ, ಎನ್ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಗೊಳ್ಳಲಿದೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ.

ಈ ಬಗ್ಗೆ ಕಿಡಿಕಾರಿರುರವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಇದೊಂದು ಕಪೋಕಲ್ಪಿತ ಸುದ್ದಿ, ಇದೆಲ್ಲಾ ಅಪ್ಪಟ ಸುಳ್ಳು. ಜೆಡಿಎಸ್ ಪಾರ್ಟಿ ಎನ್ಡಿಎ ಜೊತೆ ಸೇರ್ಪಡೆಗೊಳ್ಳಲಿದೆ ಎನ್ನುವುದನ್ನು ವ್ಯವಸ್ಥಿತವಾಗಿ ಹರಿಯಬಿಡಲಾಗುತ್ತಿದೆ"ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಏನಾಯಿತು ಗೌಡ್ರ ಪುತ್ರ ರೇವಣ್ಣಗೆ? ಯಾಕೆ ರಾಜಕೀಯ ನಿವೃತ್ತಿಯ ಮಾತು!ಏನಾಯಿತು ಗೌಡ್ರ ಪುತ್ರ ರೇವಣ್ಣಗೆ? ಯಾಕೆ ರಾಜಕೀಯ ನಿವೃತ್ತಿಯ ಮಾತು!

ಈ ಬಗ್ಗೆ ಟ್ವೀಟ್ ಮೂಲಕ ಕುಮಾರಸ್ವಾಮಿ ನೀಡಿರುವ ಸ್ಪಷ್ಟನೆ ಹೀಗಿದೆ,"ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು." ಎಂದು ಎಚ್ಡಿಕೆ ಹೇಳಿದ್ದಾರೆ.

ಗ್ರಾ.ಪಂ. ಚುನಾವಣೆ: ಬಿಜೆಪಿ ಪ್ರಾಬಲ್ಯದ ಈ 3 ಜಿಲ್ಲೆಗಳಲ್ಲಿ ಜೆಡಿಎಸ್ ಊಹಿಸಲೂ ಅಸಾಧ್ಯವಾದ ಸಾಧನೆಗ್ರಾ.ಪಂ. ಚುನಾವಣೆ: ಬಿಜೆಪಿ ಪ್ರಾಬಲ್ಯದ ಈ 3 ಜಿಲ್ಲೆಗಳಲ್ಲಿ ಜೆಡಿಎಸ್ ಊಹಿಸಲೂ ಅಸಾಧ್ಯವಾದ ಸಾಧನೆ

"ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ"ಎನ್ನುವ ಎಚ್ಚರಿಕೆಯನ್ನು ಕುಮಾರಸ್ವಾಮಿ ನೀಡಿದ್ದಾರೆ.

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕ

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕ

"ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ @ArunSinghbjp ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ

ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ

"ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ

ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ

"1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ" ಎಂದು ಕುಮಾರಸ್ವಾಮಿ, ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Recommended Video

ಭಾರತದ ಟೆಸ್ಟ್ ತಂಡದಲ್ಲಿ ಇಬ್ಬರು ಕ್ಯಾಪ್ಟನ್..! | Oneinda Kannada
ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ

ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ

"ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ" - ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

English summary
News On JDS Joining In NDA Alliance And HD Kumaraswamy Becoming Union Minister, A Clarification.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X