ಮುಂದಿನ 2 ದಿನ ರಾಜ್ಯಾದ್ಯಂತ ಭಾರಿ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಮೇ 22: ಮುಂದಿನ 2 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಎರಡು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಮೇ 22 ರಂದು ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಮೇ 22ರವರೆಗೆ 'ಯೆಲ್ಲೊ ಅಲರ್ಟ್‌' ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಎಷ್ಟು ಮಳೆ

ಬೆಂಗಳೂರಲ್ಲಿ ಎಷ್ಟು ಮಳೆ

ಬೆಂಗಳೂರು ನಗರದಲ್ಲಿ ಸಂಜೆ 5.30 ರವರೆಗೆ 21 ಮಿ.ಮೀ ಮಳೆಯಾಗಿದ್ದರೆ, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 22.8 ಮಿ.ಮೀ ಮಳೆಯಾಗಿದೆ. ಏತನ್ಮಧ್ಯೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾವುದೇ ಮಳೆಯಾಗಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28.5 ಮತ್ತು 21.6 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

 ಎಲ್ಲಿಯೂ ಜಲಾವೃತವಾಗಿಲ್ಲ

ಎಲ್ಲಿಯೂ ಜಲಾವೃತವಾಗಿಲ್ಲ

ಯಾವುದೇ ಪ್ರದೇಶದಲ್ಲಿ ಜಲಾವೃತವಾದ ವರದಿಯಾಗಿಲ್ಲ ಎಂದು ಬಿಬಿಎಂಪಿ ವಾರ್ ರೂಂ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಎರಡು ದಿನಗಳವರೆಗೆ ಮಳೆ ಅಥವಾ ಗುಡುಗು ಸಹಿತ ಬಲವಾದ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ ಮಳೆ 64.5 ಮಿಮೀ ಮತ್ತು 115.5 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

 ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳಲ್ಲಿ ಮಳೆ

ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳಲ್ಲಿ ಮಳೆ

ಉತ್ತರಾಖಂಡ, ಪಶ್ಚಿಮ ಬಂಗಾಳದ ಕೆಲ ಭಾಗ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ತುಂತುರು ಮಳೆ ಸುರಿಯಬಹುದಾಗಿದ್ದು, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ತೆಲಂಗಾಣದ ಒಂದಷ್ಟು ಪ್ರದೇಶಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದೆನ್ನಲಾಗಿದೆ. ಏತನ್ಮಧ್ಯೆ ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಹಾಗೂ ಗುಜರಾತ್ ರಾಜ್ಯದ ಪಶ್ಚಿಮ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 40ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎಂಬುದನ್ನೂ ವರದಿಗಳು ತಿಳಿಸಿವೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಅದೇರೀತಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರಾ ಮತ್ತು ಕೇರಳ ಪ್ರಾಂತ್ಯಗಳಲ್ಲೂ ಉತ್ತಮ ಮಳೆ ಸುರಿಯುವ ಸಂಭವವಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಕಳೆದ 24 ಗಂಟೆಯಲ್ಲಿ ಕೋಲಾರದಲ್ಲಿ ಅತ್ಯಧಿಕ 10 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಭಟ್ಕಳ, ದಕ್ಷಿಣ ಕನ್ನಡದ ಸುಳ್ಯ, ರಾಜಧಾನಿಗೆ ಸಮೀಪದಲ್ಲಿರುವ ಆನೇಕಲ್‌ಗಳಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+