ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು, ಮಾರ್ಚ್ 24: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ.
ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಬೆಂಗಳೂರು ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲು
ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಪ್ರದೇಶಗಳಲ್ಲಿ ಮಳೆ ಬರುವ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ.
Recommended Video

ಮುಂದಿನ 24 ಗಂಟೆ ರಾಜ್ಯದ ಹವಾಮಾನ ಹೇಗಿರಲಿದೆ?
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಕಲಬುರಗಿ, ಬೀದರ್ ಹೊರತುಪಡಿಸಿ ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ.

Click it and Unblock the Notifications