ಕರ್ನಾಟಕದ ವಿವಿಧೆಡೆ ಮುಂದಿನ ಮೂರು ದಿನ ಮಳೆಯ ಮುನ್ಸೂಚನೆ
ಬೆಂಗಳೂರು, ಅಕ್ಟೋಬರ್ 10: ಕರ್ನಾಟಕದ ವಿವಿಧೆಡೆ ಮುಂದಿನ ಮೂರು ದಿನ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು, ಸುಬ್ರಹ್ಮಣ್ಯ, ಭದ್ರಾವತಿ, ಮಳವಳ್ಳಿ, ಹುಣಸೂರು, ಆನೇಕಲ್, ಚಾಮರಾಜನಗರ, ಪುತ್ತೂರು, ನಂಜನಗೂಡು, ಯಳಂದೂರು, ಚನ್ನಪಟ್ಟಣ,ಮಂಡ್ಯ , ಭಾಗಮಂಡಲ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ.
ಅಕ್ಟೋಬರ್ 13ರವರೆಗೆ ದಕ್ಷಿಣ ಕ್ನನಡ, ಉಡುಪಿ, ಉತ್ತರ ಕನ್ನಡ,ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಶುಕ್ರವಾರ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಹಗುರ, ಕರಾವಳಿ ವಲಯದಲ್ಲಿ ಸಾಧಾರಣಾ ಮಳೆ ಬೀಳುವ ಸಂಭವವಿರುವುದಾಗಿ ಹೇಳಿದೆ.












Click it and Unblock the Notifications