ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 09: ಮುಂದಿನ ಮೂರು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಂಗಳವಾರ ಬಳ್ಳಾರಿ ಹಾಗೂ ಮೈಸೂರು ಭಾಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

<span class=ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್" title="ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್" />ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್

ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ, ಸರಗೂರಿನಲ್ಲಿ ಬಿರುಸಿನ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಗರಹೊಳೆ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಮಡಿಕೇರಿಯಲ್ಲೂ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.

ಬಳ್ಳಾರಿ ಹೊರತುಪಡಿಸಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆಬಳ್ಳಾರಿ ಹೊರತುಪಡಿಸಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ

ಮಂಗಳೂರು ಮತ್ತು ಬಂಟ್ವಾಳ ತಾಲೂಕಿನಲ್ಲಿ ಕೆಲ ಹೊತ್ತು ಮಳೆಯಾಗಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿಯಲ್ಲಿ ತುಂತುರು ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಕೆಲವೆಡೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಕೆಲವಡೆ ಮಳೆಯಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮಂಗಳವಾರ ಅಲ್ಲಲ್ಲಿ ಮಳೆಯಾಗಿದೆ, ಇಂದೂ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಒಣಹವೆ

ಎಲ್ಲೆಲ್ಲಿ ಒಣಹವೆ

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ.

Recommended Video

ಭಾರತದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಇಂದು ನಿವೃತ್ತಿ | Parthiv Patel | Oneindia Kannada
ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಹೊಸದುರ್ಗ, ಶಿವಾನಿ, ತುಮಕೂರು, ಕೆಜಿಎಫ್, ಬಂಗಾರಪೇಟೆ, ಕೊಳ್ಳೇಗಾಲ, ಹಿರಿಯೂರು, ಆಲೂರು, ಚನ್ನಗಿರಿ, ಹಳೆಬೀಡು, ಸಕಲೇಶಪುರ, ಮಂಡ್ಯ, ಮಳವಳ್ಳಿ, ಯಳಂದೂರು, ಬಂಡೀಪುರ, ಲಕ್ಕವಳ್ಳಿ, ಕಡೂರು, ಹೆಸರಘಟ್ಟದಲ್ಲಿ ಮಳೆಯಾಗಿದೆ. ಬೀದರ್‌ನಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Meteorologica Department Predicted that Heacy rainfall Over Karnataka Till December 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X