ಮುಂದಿನ 3 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಏಪ್ರಿಲ್ 27: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆ ಬೀಳಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆ
ಹಳಿಯಾಳ, ಸುಳ್ಯ, ಮಾಣಿ, ಬೆಳಗಾವಿ, ಕಮಲಪುರ, ಬಂಟವಾಳ, ಮಂಗಳೂರು, ಕಲಬುರಗಿ, ಮಂಗಳೂರು, ಹುಮ್ನಾಬಾದ್, ತುರುವೇಕೆರೆಯಲ್ಲಿ ಮಳೆಯಾಗಿದೆ.
ತಾಲ್ಲೂಕಿನ ಹಲವು ಭಾಗಗಳಲ್ಲಿ ಸುರಿದ ತೀವ್ರ ಮಳೆಗಾಳಿಗೆ ತೆಂಗು, ಬಾಳೆ, ಹಾಗೂ ವಿದ್ಯುತ್ ಕಂಬಗಳು ಮುರಿದು ನೆಲಕ್ಕೆ ಬೀಳುವ ಮೂಲಕ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಬೆಂಗಳೂರಿನಲ್ಲೂ ಮಳೆ ಬರುವ ಸಾಧ್ಯತೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳು
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆ ಬೀಳಲಿದೆ.
Recommended Video

ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.












Click it and Unblock the Notifications