ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 05: ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.ಬೀದರ್‌ನಲ್ಲಿ ಸತಿ ಕನಿಷ್ಠ ಉಷ್ಣಾಂಶ ಅಂದರೆ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಮಿಳುನಾಡಿನಲ್ಲೂ ಮಳೆ ಸಾಧ್ಯತೆ

ತಮಿಳುನಾಡಿನಲ್ಲೂ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮತ್ತು ನಾಳೆ ತುಂತುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ತುಂತುರು ಮಳೆ ಮುಂದುವರೆಯಲಿದೆ.

ವೇಗ ಪಡೆದ ಹಿಂಗಾರು

ವೇಗ ಪಡೆದ ಹಿಂಗಾರು

ಕರ್ನಾಟಕದಲ್ಲಿ ಹಿಂಗಾರು ಮಳೆ ವೇಗ ಪಡೆದಿದೆ. ಮಂಗಳವಾರ ರಾತ್ರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದೆ.

ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ನಾಳೆಯಿಂದ ನ. 7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ಉತ್ತರ ಒಳನಾಡಿನಲ್ಲಿ ನ. 7ರವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗಗಳಲ್ಲಿ ಮಳೆ

ಕರಾವಳಿ ಭಾಗಗಳಲ್ಲಿ ಮಳೆ

ಇಂದು ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ನ. 7ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಅಸ್ಸಾಂ,ಮಣಿಪುರದಲ್ಲೂ ಮಳೆ ಸಾಧ್ಯತೆ

ಅಸ್ಸಾಂ,ಮಣಿಪುರದಲ್ಲೂ ಮಳೆ ಸಾಧ್ಯತೆ

ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ನ. 7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ನ. 5ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ನ. 5ರ ಬಳಿಕ ರಾಜ್ಯದಲ್ಲಿ 2-3 ದಿನ ಭಾರೀ ಮಳೆಯ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+