ಮುಂದಿನ 4 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಏಪ್ರಿಲ್ 24: ಮುಂದಿನ 4 ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಮನಗರ, ಮಂಕಿ, ಆನವಟ್ಟಿ, ತಾಳಗುಪ್ಪ, ಸೊರಬ, ಹುಂಚದಕಟ್ಟೆ, ಬೆಳ್ತಂಗಡಿ, ಕೋಲಾರ, ನಾಗಮಂಗಲ, ಭಟ್ಕಳ, ಯಲಬುರ್ಗಾ, ಮಸ್ಕಿ, ಮೂಡಬಿದಿರೆ, ಪುತ್ತೂರು, ಕೊಲ್ಲೂರು, ಕೋಟಾ, ಹೊನ್ನಾವರ, ಸಂತೆಬೆನ್ನೂರು, ದಾವಣಗೆರೆ, ಧರ್ಮಸ್ಥಳ, ದಾವಣಗೆರೆ, ಹರಪ್ಪನಹಳ್ಳಿ, ಮಾಗಡಿಯಲ್ಲಿ ಮಳೆಯಾಗಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇದೇ ರೀತಿ ಇನ್ನೂ ನಾಲ್ಕು ದಿನ ಮುಂದುವರೆಯುವ ಸಾಧ್ಯತೆ ಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಪೂರ್ವ ಮುಂಗಾರು ಮಳೆಯಾಗಲಿದೆ.
ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಏ.26ರಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ ಎಂದು ಹವಾಮಾನ ಇಲಾಖೆ
ರಾಜ್ಯದಲ್ಲಿ ಬೇಸಿಗೆಯಲ್ಲಿ ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆಯಾಗುವುದು ವಾಡಿಕೆ. ಕೆಲವೆಡೆ ಭಾರೀ ಪ್ರಮಾಣದ ಆಲಿಕಲ್ಲು ಬಿದ್ದಿರುವ ವರದಿಯಾಗಿದೆ.
ನಿನ್ನೆ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪು, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.

ಉತ್ತರ ಕರ್ನಾಟಕದಲ್ಲಿ ಮಳೆ ಕಡಿಮೆ
ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ ಎಂದು ಹೇಳಿದರು. ಏ.1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 27.1 ಮಿಲಿ ಮೀಟರ್‍ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾದಂತಾಗಿದೆ. ಕಳೆದ ಮೂರು ವಾರಗಳ ರಾಜ್ಯದ ವಾಡಿಕೆ ಪ್ರಮಾಣ 21.1 ಮಿಲಿಮೀಟರ್ ಆಗಿದ್ದು,

ಮಳೆಯ ಕೊರತೆ
ಈ ಅವಧಿಯಲ್ಲಿ ವಾಡಿಕೆಗಿಂತ ಶೇ.28ರಷ್ಟು ಹೆಚ್ಚು ಮಳೆಯಾಗಿದೆ. 26 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಗದಗ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ರಾಜ್ಯದ 153 ತಾಲ್ಲೂಕುಗಳಲ್ಲಿ ವಾಡಿಕೆ ಮತ್ತು ಅದಕ್ಕಿಂತ ಹೆಚ್ಚು ಮಳೆಯಾಗಿದ್ದು, 74 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದೆ. 34 ತಾಲ್ಲೂಕುಗಳಲ್ಲಿ ಮಳೆ ಕೊರತೆ ತೀವ್ರವಾಗಿದೆ.
538 ಹೋಬಳಿಗಳಲ್ಲಿ ವಾಡಿಕೆ ಮಳೆಯಾಗಿದ್ದು, 352 ಹೋಬಳಿಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ, 153 ಹೋಬಳಿಗಳಲ್ಲಿ ಮಳೆ ಕೊರತೆ ಹೆಚ್ಚಾಗಿ ಕಂಡು ಬಂದಿದೆ ಎಂದು ತಿಳಿಸಿದರು.

ದಕ್ಷಿಣ ಒಳನಾಡಿನಲ್ಲಿ 30.6 ಮಿಲಿಮೀಟರ್ ಮಳೆಯಾಗಿದೆ
ಏ.1ರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡಿನಲ್ಲಿ 30.6 ಮಿಲಿಮೀಟರ್, ಉತ್ತರ ಒಳನಾಡಿನಲ್ಲಿ 14.6 , ಮಲೆನಾಡಿನಲ್ಲಿ 43.3 ಹಾಗೂ ಕರಾವಳಿ ಭಾಗದಲ್ಲಿ 54.3 ಮಿಲಿ ಮೀಟರ್‌ನಷ್ಟು ಮಳೆಯಾಗಿದೆ.
Recommended Video

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಬೆಂಗಳೂರು ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications