ಮುಂದಿನ 4 ದಿನ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರು, ಮೇ 05: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 5 ರಿಂದ ಮೇ 8ರವರೆಗೂ ಮಳೆಯಾಗಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು ಹಾಗೂ ಸಿಡಿಲು ಹೆಚ್ಚಾಗಿರಲಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.

ಎಲ್ಲಿ ಎಷ್ಟು ಮಳೆಯಾಗಿದೆ?

ಎಲ್ಲಿ ಎಷ್ಟು ಮಳೆಯಾಗಿದೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಗರಿಷ್ಠ 5 ಸೆಂ.ಮೀ ಮಳೆಯಾಗಿದೆ, ಸುಬ್ರಹ್ಮಣ್ಯ, ಕುಶಾಲನಗರ 2, ಕೋಟ ಹಾಗೂ ಸಂತೆಬೆನ್ನೂರಿನಲ್ಲಿ ತಲಾ 1 ಸೆಂ,ಮೀ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ತಾಪಮಾನ ದಾಖಲಾಗಿದೆ

ಎಲ್ಲೆಲ್ಲಿ ಎಷ್ಟು ತಾಪಮಾನ ದಾಖಲಾಗಿದೆ

ಕಲಬುರಗಿಯಲ್ಲಿ ಗರಿಷ್ಠ 38.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ, ರಾಯಚೂರು, ಬಾಗಲಕೋಟೆ, ದಾವಣಗೆರೆ 37 ಡಿಗ್ರಿ ಸೆಲ್ಸಿಯಸ್, ಗದಗ, ವಿಜಯಪುರ, ಕಾರವಾರ, 36 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಲಿರುವ ಪ್ರದೇಶಗಳು

ಮಳೆಯಾಗಲಿರುವ ಪ್ರದೇಶಗಳು

ರಾಜ್ಯದ 8 ಜಿಲ್ಲೆಗಳಲ್ಲಿ ಮೇ 6 ರಿಂದ ಎರಡು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+