ಅಕ್ಟೋಬರ್ 20ರಿಂದ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 20 ರಂದು ರಾಯಚೂರು, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ. ಅಕ್ಟೋಬರ್ 21 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಯಾದಗಿರಿ,ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 22 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ ಮಳೆಯಾಗಲಿದೆ.

ಅಕ್ಟೋಬರ್ 23 ರಂದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಅಂದರೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮಳೆ ಆರಂಭ

ಬೆಂಗಳೂರಲ್ಲಿ ಮಳೆ ಆರಂಭ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮೈಸೂರು ರಸ್ತೆ, ಚಾಮರಾಜಪೇಟೆ, ಹೊಸಕೆರೆಹಳ್ಳಿ, ವಿಜಯನಗರ, ನಾಯಂಡಹಳ್ಳಿ, ಶ್ರೀನಗರ, ಚಂದ್ರಾ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇಔಟ್, ಜಯನಗರ, ಕೆಆರ್​ ಮಾರ್ಕೆಟ್ ಸೇರಿ ಹಲವೆಡೆ ಜೋರು ಮಳೆಯಾಗಿದೆ.ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೊರಟ ಬೈಕ್ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಬೀದರ್, ಚಿಂತಾಮಣಿ, ಮಹಾಲಿಂಗಪುರ, ಔರಾದ್, ಮಡಿಕೇರಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ

ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುತ್ತಿದ್ದರೂ ಕೂಡ ಈ ವಾರಾಂತ್ಯದ ಒಳಗೆ ಮಳೆ ಕಡಿಮೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಕೊಡಗಿನಲ್ಲಿ ಮಳೆಯಾಗಲಿದೆ.

ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶ ಎಲ್ಲಿದೆ?

ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶ ಎಲ್ಲಿದೆ?

ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್‌ಪೋರ್ಟ್‌ಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+