ಮುಂದಿನ 5 ದಿನ ಕರ್ನಾಟಕದಾದ್ಯಂತ ಭಾರಿ ಮಳೆಯ ಎಚ್ಚರಿಕೆ

ಬೆಂಗಳೂರು, ಜುಲೈ 18: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಹಳ್ಳ, ಕೊಳ್ಳ, ನದಿಗಳು ಉಕ್ಕಿ ಹರಿದಿವೆ.

Recommended Video

      ಕೊರೊನ ವಿರುದ್ಧದ ಯುದ್ಧದಲ್ಲಿ ಗೆದ್ದ Sharath Bacche Gowda | Oneindia Kannada

      ಮುಂದಿನ ಐದು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಉತ್ತಮ ಮಳೆ ಆಗುತ್ತಿರುವುದು ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪರಿಣಾಮ ಕಾವೇರಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

      ಒಂದೆಡೆ ಕೊರೊನಾ ಭೀತಿ ಹಾಗೂ ಮತ್ತೊಂದೆಡೆ 2 ವರ್ಷದಿಂದ ಪ್ರಾಕೃತಿಕ ವಿಕೋಪದಿಂದ ನಲುಗಿಹೋಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಭೀತಿಯನ್ನು ಮೂಡಿಸಿದೆ.

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.

      ಕಲಬುರಗಿಯ ಚಿಮ್ಮನಚೋಡ ಗ್ರಾಮದಲ್ಲಿ ಸಂಗಮೇಶ್ವರ ದೇವಾಲಯ ಇದೆ. ಗುರುವಾರ ಈ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ದೇವಾಲಯದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಸಂಗಮೇಶ್ವರ ದೇವಾಲಯದ ಬಳಿ ನಾಗರಾಳ ಜಲಾಶಯ ಇದೆ.

      ಇಲ್ಲಿ ಭಾರೀ ಪ್ರಮಾಣದ ನೀರು ಬಿಡಲಾಗಿತ್ತು. ಈ ವೇಳೆ ದೇವಾಲು ಮುಳುಗಿತ್ತು. ನಂತ ನೀರು ಬಿಡುವುದನ್ನು ನಿಲ್ಲಿಸಿ, ದೇವಾಲಯದಲ್ಲಿ ಇರುವವರನ್ನು ರಕ್ಷಣೆ ಮಾಡಲಾಗಿದೆ.ವಿಜಯಪುರದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಹೀಗಾಗಿ ಈ ಭಾಗದಲ್ಲಿ ಕೃಷಿ ಚಟುವಟಕೆಗಳು ಭರದಿಂದ ಸಾಗಿವೆ.

      ರಾಜ್ಯದಲ್ಲಿ ಇಂದು ಸಾಧಾರಣ ಮಳೆ

      ರಾಜ್ಯದಲ್ಲಿ ಇಂದು ಸಾಧಾರಣ ಮಳೆ

      ರಾಜ್ಯದ ಹಲವೆಡೆ ಇಂದು ಸಾಧಾರಣ ಮತ್ತು ಅಲ್ಪಸ್ವಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಮುಸುಗಿದ ವಾತಾವರಣ ನಿರ್ಮಾಣವಾಗಿದೆ. ಕಲಬುರಗಿ, ವಿಜಯಪುರ ಜಿಲ್ಲೆಯ ಇಂಡಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ ಹಲವು ಪ್ರದೇಶಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಲಿದೆ.

      ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ

      ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ

      ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಮಲೆನಾಡು ಭಾಗ ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ವರುಣ ಅಟ್ಟಹಾಸ ಮೆರೆಯಲಿದ್ದಾನೆ. ದಕ್ಷಿಣ ಕರಾವಳಿ ಭಾಗವಾಗಿರುವ ದಕ್ಷಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಭೀಮಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

      ಭೀಮಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

      ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾಶಯಗಳ ಒಳ ಹರಿವು ಸಹ ಹೆಚ್ಚಳವಾಗಿದ್ದು, ಯಾರು ನದಿಯ ದಂಡೆಯ ಕಡೆಗೆ ಹೊಗದಂತೆ ಜಿಲ್ಲಾಧಿಕಾರಿ ಬಿ. ಶರತ್ ಆದೇಶಿಸಿದ್ದಾರೆ.

      ಮೂಡಿಗೆರೆ, ಶೃಂಗೇರಿಯಲ್ಲೂ ಮಳೆ

      ಮೂಡಿಗೆರೆ, ಶೃಂಗೇರಿಯಲ್ಲೂ ಮಳೆ

      ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
      ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.
      ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+