ಮುಂದಿನ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ: ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡಿದ್ದಾರೆ. ಈ ಅಭಿಯಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೂಡ ಮುಂದುವರಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನೂತನ ಪಾಲಿಕೆಗಳಿಗೂ ಸಹ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಇದರಲ್ಲೂ ಇವಿಎಂಗೆ ಗುಡ್‌ಬೈ ಹೇಳುವ ಸಾಧ್ಯತೆ ಇದೆ.
ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನದಡಿ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹವಾಗಿದೆ ಎಂದಿದ್ದಾರೆ. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ ಎಂದಿದ್ದಾರೆ.

ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ. ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ ಎಂದು ಕರೆ ನೀಡಿದ್ದಾರೆ.

ಸಹಿ ಸಂಗ್ರಹ ದಾಖಲೆಗಳು ದೆಹಲಿಗೆ
ವೋಟ್ ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು. ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಅಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications