ಮುಂದಿನ ವಾರ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ಫೈನಲ್: ಯಡಿಯೂರಪ್ಪ

ತುಮಕೂರು, ಮಾರ್ಚ್‌ 02: ಮುಂದಿನ ವಾರ ಲೋಕಸಭೆ ಚುನಾವಣೆಯ ರಾಜ್ಯ ಬಿಜೆಪಿ ಟಿಕೆಟ್‌ಗಳು ಫೈನಲ್ ಆಗುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.

ಮುಂದಿನ ವಾರ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಿದ್ದು, ಅಂದೇ ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರಿನಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಟ 20 ಕ್ಷೇತ್ರಗಳನ್ನು ಗೆಲ್ಲುವ ಭರವಸೆ ಇದೆ ಎಂದು ಹೇಳಿದರು.

Next week BJP will announce its Karnataka candidates for MP elections

ಟಿಕೆಟ್ ಅನ್ನು ಪಕ್ಷದ ಆಂತರಿಕ ಸಮೀಕ್ಷೆ ಮೂಲಕವೇ ಹಂಚಿಕೆ ಮಾಡಲಾಗುತ್ತಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.

ಕಳೆದ ಬಾರಿಗಿಂತಲೂ ಹೆಚ್ಚಿನ ಸೀಟುಗಳನ್ನು ಬಿಜೆಪಿ ರಾಷ್ಟ್ರಮಟ್ಟದಲ್ಲಿ ಜಯಿಸಲಿದ್ದು, 300 ಸೀಟು ಗೆದ್ದು ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದೆ ಎಂದು ಯಡಿಯೂರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+