NHAI: ಕರ್ನಾಟಕದಲ್ಲಿ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಬಗ್ಗೆ ಬಿಗ್ ಅಪ್ಡೇಟ್
Karnataka New Highways: ಕರ್ನಾಟದಲ್ಲಿ ಹೆದ್ದಾರಿ ಅಭಿವೃದ್ದೀ ವಿಚಾರದಲ್ಲಿ ಬಹುದೊಡ್ಡ ಕ್ರಾಂತಿ ಆಗುತ್ತಿದೆ. ಇದೀಗ ರಾಜ್ಯದಲ್ಲಿ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಿದೆ. ಹಾಗೆಯೇ ವಾರ್ಷಾಂತ್ಯಕ್ಕೆ ರಾಜ್ಯದಲ್ಲಿ ಎಷ್ಟು ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಪೂರ್ಣಗೊಳ್ಳಲಿದೆ ಹಾಗೂ ಇದಕ್ಕೆ ಎಷ್ಟು ವೆಚ್ಚ ಮಾಡಲಾಗುತ್ತಿದೆ ಎನ್ನುವ ಬಿಗ್ ಅಪ್ಡೇಟ್‌ವೊಂದನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೊಟ್ಟಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಕರ್ನಾಟಕದಲ್ಲಿ ಹಲವೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇವುಗಳು ಶೀಘ್ರದಲ್ಲಿ ಇದರಲ್ಲಿ ಕಲವು ಪೂರ್ಣಗೊಳ್ಳಲಿವೆ ಎನ್ನುವ ಮಾಹಿತಿಯನ್ನು ಈಗಾಲೇ ನಿತಿನ್ ಗಡ್ಕರಿಯವರು ನೀಡಿದ್ದಾರೆ. ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡಿದ್ದು, ವಾಹನ ಸಂಚಾರ ಕೂಡ ಮಾಡುತ್ತಿವೆ. ಅಲ್ಲದೆ, ಟೋಲ್ ಸಂಗ್ರಹ ಕೂಡ ಮಾಡಲಾಗುತ್ತಿದೆ. ಆದರೂ ಈ ಮಾರ್ಗದ ಹಲವೆಡೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ.

ಇನ್ನು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಕರ್ನಾಟಕ ಭಾಗದಲ್ಲಿ ಸಪೂರ್ಣವಾಹಿಗಿ ಮುಕ್ತಾಯಗೊಂಡು ವಾಹ ಸಂಚಾರ ಮಾಡುತ್ತಿವೆ. ಆದರೆ, ಇದು ಇನ್ನೂ ಲೋಕಾರ್ಪಣೆಗೊಂಡಿಲ್ಲ. ಆಂಧ್ರಪ್ರದೇಶ, ತಮಿಳುನಾಡು ಭಾಗದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಾ ಬರುತ್ತಿದ್ದು, ಶೀಘ್ರದಲ್ಲಿ ಇದು ಕೂಡ ನೆರವೇರಲಿದೆ ಎನ್ನುವ ಮಾಹಿತಿ ಇದೆ. ಈ ನಡುವೆಯೇ ನಿತಿನ್ ಗಡ್ಕರಿ ಅವರಿ ರಾಜ್ಯದಲ್ಲಿನ 23 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಬಗ್ಗೆ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ.
10,749 ಕೋಟಿ ರೂಪಾಯಿ ವೆಚ್ಚದ ಹೆದ್ದಾರಿ ಕಾಮಗಾರಿ: ಕರ್ನಾಟಕ ರಾಜ್ಯದಲ್ಲಿ 2025ನೇ ವರ್ಷಾಂತ್ಯದ ವೇಳೆಗೆ 23 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಪೂರ್ಣ ಆಗಲಿದೆ ಎಂದು ಎಂದು ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗೊಪ್ಪ ಪ್ರಶ್ನೆಗೆ ಬುಧವಾರ ಉತ್ತರ ನೀಡಿದ ಅವರು, 600 ಕಿಲೋ ಮೀಟರ್ ಉದ್ದದ ಈ ಹೆದ್ದಾರಿಗಳ ನಿರ್ಮಾಣ ಮಾಡಲು ಅಂದಾಜು 10,749 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹಾಗೆಯೇ ಇವುಗಳ ಪೂರ್ಣಗೊಳಿಸುವಿಕೆಯ ಅವಧಿ ಬಗ್ಗೆ ಕೂಡ ಮಾಹಿತಿ ನೀಡಿ ಗಮನ ಸೆಳೆದಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ ಹೆದ್ದಾರಿ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಪೈಕಿ ಬಹುನೀರೀಕ್ಷಿತ ಬೆಂಗಳೂರು-ಚೆನ್ನೇ ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಹೊಸ್ತಿಲಲ್ಲಿದೆ.
ಹೀಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜೋರಾಗಿ ನಡೆಯುತ್ತಿದೆ. ಕೆಲವು ಉದ್ಘಾಟನೆ ಹಂತದಲ್ಲಿದ್ದರೆ, ಇನ್ನೂ ಹಲವು ಕಾಮಗಾರಿ ಹಂತದಲ್ಲಿವೆ. ಒಟ್ಟಿನಲ್ಲಿ ರಾಷ್ಟ್ರೀ ಹೆದ್ದಾರಿ ಕಾಮಗಾರಿ ಆರಂಭಕ್ಕೂ ಮುನ್ನ ಸಾವಿರ ಅಡೆತಡೆಗಳು ಬರುತ್ತವೆ. ಇವೆಲ್ಲವನ್ನೂ ಮೀರಿ ಒಂದು ಹೆದ್ದಾರಿ ನಿರ್ಮಾಣ ಮಾಡಬೇಕೆಂದರೆ ಮಾತನಾಡುವಷ್ಟು ಸುಲಭವಲ್ಲ. ಇವೆಲ್ಲವನ್ನು ದಾಟಿಕೊಂಡು ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ತನ್ನ ಜಾಲವನ್ನು ವಿಸ್ತರಿಸುವ ಕಾರ್ಯಗಳು ನಡೆಯುತ್ತಿವೆ. ಈಗಾಗಲೇ ಕರ್ನಾಟಕದಲ್ಲಿ ಹಲವು ರಾಷ್ಟ್ರೀಯ ಹೆದ್ದಾರಿಗಳು ಸೇವೆಯಲ್ಲಿದ್ದು, ಇವುಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳು ಪ್ರಗತಿಯಲ್ಲಿವೆ.












Click it and Unblock the Notifications