ದಾಬಸ್‌ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರಿಗೆ NHAI ಭರ್ಜರಿ ಗುಡ್ ನ್ಯೂಸ್
Dabaspet-Hoskote National Highway: ರಾಜ್ಯದಲ್ಲಿ ಎಕ್ಸ್‌ಪ್ರೆಸ್ ವೇ ಹಾಗೂ ರಾಷ್ಟ್ರೀಯ ಹೆದ್ದಾರಿ ಜಾಲಗಳು ವಿಸ್ತರಣೆಯಾಗುತ್ತಲಿವೆ. ಈ ನಡುವೆಯೇ ಕೆಲವು ಹೆದ್ದಾರಿಗಳಲ್ಲಿ ಸಮಸ್ಯೆಗಳು ಕಂಡುಬರುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವಂತಹ ಕೆಲಸಗಳು ಸಹ ನಡೆಯುತ್ತಿವೆ. ಇದೀಗ ದಾಬಸ್‌ಪೇಟೆ-ಹೊಸಕೋಟೆ NH ವಾಹನ ಸವಾರರಿಗೆ ಪ್ರಾಧಿಕಾರ ಶುಭಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಉದ್ಘಾಟನೆ ಹಂತದಲ್ಲಿರುವ ಬಹುನಿರೀಕ್ಷಿತ ಎಕ್ಸ್‌ಪ್ರೆಸ್ ವೇಗಳಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕೂಡ ಒಂದಾಗಿದೆ. ಕರ್ನಾಟಕ ಭಾಗದಲ್ಲಿ ಈಗಾಗಲೇ ಪೂರ್ಣಗೊಂಡಿದ್ದು, ವಾಹನ ಸಂಚಾರಕ್ಕೂ ಸಹ ಅವಕಾಶ ಕಲ್ಪಿಸಿಕೊಡಲಾಗಿದೆ. ಅಲ್ಲದೆ, ಇದರ ಉದ್ಘಾಟನೆಗೂ ಮುನ್ನ ಈಗಾಗಲೇ ಟೋಲ್ ದರವನ್ನು ರಿವೀಲ್ ಮಾಡಲಾಗಿದೆ.

ಇದರ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಲೇ ಬಂದಿದೆ. ಇದಕ್ಕೆ ಕಾರಣವೂ ಕೂಡ ಇದೆ. ಕರ್ನಾಟಕ ಭಾಗದಲ್ಲಿ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಭಾಗದಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಲೋಕಾರ್ಪಣೆ ದಿನಾಂಕ ಮುಂದೂಡಿಯಾಗುತ್ತಾ ಬಂದಿದೆ. ಇತ್ತೀಚೆಗಷ್ಟೇ ಎನ್‌ಎಚ್‌ಎಯು ಮುಂದಿನ ವರ್ಷ ಅಂದರೆ 2026ರ ಮಧ್ಯದಲ್ಲಿ ಉದ್ಘಾಟನೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಯಾಗಿ ವಾಹನಗಳು ಸಹ ಸಂಚಾರ ಮಾಡುತ್ತಿವೆ. ಮತ್ತೊಂದೆಡೆ ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕೂಡ ಕರ್ನಾಟಕ ಭಾಗದಲ್ಲಿ ಪೂರ್ತಿಯಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಈ ನಡುವೆಯೇ ಬೆಂಗಳೂರು-ಚೆನ್ನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ದಾಬಸ್‌ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮಾಡುವ ದ್ವಿಚಕ್ರ ವಾಹನ ಸಂವಾರರಿಗೆ ಎನ್‌ಎಚ್‌ಎಐ ಗುಡ್ ನ್ಯೂಸ್‌ವೊಂದನ್ನು ನೀಡಿದೆ.
ಬೆಂಗಳೂರು-ಚೆನ್ನೈ ಹೆದ್ದಾರಿ ಸಂಪರ್ಕಿಸುವ ದಾಬಸ್‌ಪೇಟೆ-ಹೊಸಕೋಟೆವರೆಗಿನ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸ್ಕೈವಾಕ್ ಮಾದರಿ ವ್ಯವಸ್ಥೆ ಮಾಡಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ರಾಜ್ಯದ ಹಲವು ಹೆದ್ದಾರಿಗಳಲ್ಲಿ ಅಪಘಾತಗಳು ಸಾಮಾನ್ಯ ಆಗಿಬಿಟ್ಟಿವೆ.
ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹಾದು ಹೋಗಿರುವ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆಯೇ ಹೆಚ್ಚಾಗಿದೆ. ಇನ್ನೂ ಔಟರ್ ರಿಂಗ್ ರೋಡ್‌ನಲ್ಲಿ ಇರುವ ದಾಬಸ್‌ಪೇಟೆ-ಹೊಸಕೋಟೆಯ ಹೆದ್ದಾರಿ ನಡುವೆ ಬಹಳಷ್ಟು ಹಳ್ಳಿಗಳು ಬರಲಿದ್ದು, ಈ ಭಾಗದಲ್ಲಿ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗಿವೆ. ಹಳ್ಳಿಗಳಿಂದ ದ್ವಿಚಕ್ರ ವಾಹನಗಳು ಹೆದ್ದಾರಿಗೆ ಪ್ರವೇಶಿಸುವಾಗ ಅಪಘಾತಕ್ಕೆ ಒಳಗಾಗುವ ಘಟನೆಗಳು ಜರುಗಿವೆ.
ಹೆದ್ದಾರಿಯ ಮತ್ತೊಂದು ಕಡೆಯಲ್ಲಿ ತಮ್ಮ ಊರುಗಳಿಗೆ ಹೋಗಬೇಕೆಂದರೆ ಕಿಲೋ ಮೀಟರ್‌ಗಟ್ಟಲೇ ಹೋಗಿ ಯೂಟರ್ನ್ ತೆಗೆದುಕೊಂಡಬರಬೇಕಾದ ಪರಿಸ್ಥಿತಿ ಇದೆ. ಇದನ್ನು ನಿಯಂತ್ರಿಸಲು ರಾಜ್ಯದಲ್ಲಿಯೇ ಸ್ಕೈವಾಕ್ ನಿರ್ಮಾಣ ಮಾಡುವ ಮಹತ್ವದ ನಿರ್ಧಾರವನ್ನು ಪ್ರಾಧಿಕಾರ ತೆಗೆದುಕೊಂಡಿದೆ. ಹಾಗಾದ್ರೆ ಎಷ್ಟು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಬಹುತೇಕ ಮಂದಿಯ ತಲೆಯಲ್ಲಿರುತ್ತದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ ನೋಡಿ.
ದಾಬಸ್‌ಪೇಟೆ-ಹೊಸಕೋಟೆಯವರೆಗೆ 84 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ 648ರಲ್ಲಿ 2 ಟೋಲ್‌ಗಳು ಕಾರ್ಯನಿರ್ವಹಿಸುತ್ತಿದೆ. ಈ ಭಾಗದಲ್ಲಿ ತುಂಬಾ ಹಳ್ಳಿಗಳು ಬರುತ್ತವೆ. ಹೆಚ್ಚಿನ ದ್ವಿಚಕ್ರ ವಾಹನಗಳು, ಜನರು ಸಂಚಾರ ಮಾಡುವ ಹೆದ್ದಾರಿಯನ್ನು ಕ್ರಾಸ್ ಮಾಡುವ ಸ್ಥಳವನ್ನು ಗುರುತಿಸಲಾಗಿದೆ. ಒಟ್ಟು 17 ಕಡೆಗಳಲ್ಲಿ 22 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಕೈವಾಕ್ ಮಾದರಿಯಲ್ಲಿ ಈ ಮೇಲ್ಸೇತುವೆ ನಿರ್ಮಾಣ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.
ಹೊಸದಾಗಿ ನಿರ್ಮಾಣ ಮಾಡಲು ಮುಂದಾಗಿರು ಸ್ಕೈವಾಕ್‌ನಲ್ಲಿ ದ್ವಿಚಕ್ರ ವಾಹನಗಳ ಪ್ರಯಾಣಕ್ಕೆ ಹಾಗೂ ಜನರ ಓಡಾಟಕ್ಕೆ ಪ್ರತ್ಯೇಕ ವ್ಯವಸ್ಥೆ ವ್ಯವಸ್ಥೆ ಮಾಡಲಾಗುತ್ತದೆ. ಈ ಮೂಲಕ ಸುಲಭವಾಗಿ ಹೆದ್ದಾರಿಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳು ಅವಕಾಶ ಸಿಕ್ಕಾಂತಾಗಲಿದೆ. ಅಲ್ಲದೆ, ಅಪಘಾತಗಳ ಸಂಖ್ಯೆ ನಿಯಂತ್ರಣ ಆಗಲು ಕೂಡ ಸಾಧ್ಯ ಆಗಲಿದೆ ಎಂದು ಹೇಳಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ತುದಿಗಳನ್ನು ಸಂಪರ್ಕ ಕಲ್ಪಿಸುವ ಮೂಲಕ ವಾಹನ ದಟ್ಟಣೆ ನಿಯಂತ್ರಿಸುವ ಜೊತೆಗೆ ಸುಲಭವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ ಸಂಪರ್ಕಿಸಲು ಈ ಹೆದ್ದಾರಿ ಸಹಕಾರಿ ಆಗಲಿದೆ. ಇನ್ನೂ ಇದೀಗ ಇರುವ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳು ಸಂಚಾರ ಮಾಡುವುದು ಹಾಗೂ ಜನರು ಓಡಾಡಲು ಕೂಡ ಕಷ್ಟವಾಗುತ್ತಿದೆ. ಅಷ್ಟೂ ವೇಗವಾಗಿ ವಾಹನಗಳು ಓಡಾಡುತ್ತಿರುತ್ತವೆ.
ದ್ವಿಚಕ್ರ ವಾಹನ ಸವಾರರು ಹಾಗೂ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಬೇಕೆಂದರೆ ತುಂಬಾ ತೊಂದರೆ ಆಗುತ್ತಿದೆ. ಈ ವೇಳೆಯೇ ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದ್ದರಿಂದ ಇದನ್ನು ನಿಯಂತ್ರಣಕ್ಕೆ ತರಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸ್ಕೈವಾಕ್ ನಿರ್ಮಾಣ ಮಾಡುವ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎಂದು ಹೇಳಲಾಗುತ್ತಿದೆ. ಈ ಭಾಗದ ಜನರು ಕೂಡ ಈ ಸ್ಕೈವಾಕ್ ನಿರ್ಮಾಣದ ಸುದ್ದಿ ಕೇಳಿ ಸಂತಸಪಟ್ಟಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications