ನ್ಯಾಷನಲ್ ಇನ್ಸುರೆನ್ಸ್ ಕಂಪೆನಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜ.23 : ನ್ಯಾಷನಲ್ ಇನ್ಸುರೆನ್ಸ್ ಕಂಪೆನಿಯಲ್ಲಿ 1000 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 65 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31.
ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ಶ್ರೇಣಿ ರೂ. 7,640ರಿಂದ 21,050. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2015ರ ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುವವರ 500 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಕರ್ನಾಟಕದಲ್ಲಿ ಒಟ್ಟು 65 ಹುದ್ದೆಗಳಿವೆ. ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಕಲಬುರಗಿಯಲ್ಲಿ ಆಯ್ಕೆ ಪರೀಕ್ಷೆಗಳು ನಡೆಯುತ್ತವೆ. [ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

ವಿದ್ಯಾರ್ಹತೆ : ಪದವಿ ಅಥವಾ ಎಚ್‌ಎಸ್‌ಸಿ/ತತ್ಸಮಾನ/ (12ನೇ ತರಗತಿ) ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಪದವಿ/ಎಚ್‌ಎಸ್‌ಸಿನಲ್ಲಿ ಇಂಗ್ಲಿಷ್ ಒಂದು ವಿಷಯವಾಗಿರಬೇಕು. [ಮಂಗಳೂರಿನ ಬಂದರಿನಲ್ಲಿ 23 ಹುದ್ದೆಗಳಿವೆ ಅರ್ಜಿ ಹಾಕಿ]
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ 28 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷದ ವಯೋಮಿತಿ ಸಡಿಲಿಕೆ ಇದೆ. ಹೆಚ್ಚಿನ ಮಾಹಿತಿಗೆ https://nationalinsuranceindia.nic.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.











Click it and Unblock the Notifications