ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕರ್ನಾಟಕದಲ್ಲಿ 10 ದಿನದ ನೈಟ್ ಕರ್ಫ್ಯೂ ಜಾರಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 28; ಕರ್ನಾಟಕ ಸರ್ಕಾರದ ಘೋಷಣೆಯಂತೆ ರಾಜ್ಯದಲ್ಲಿ 10 ದಿನದ ನೈಟ್ ಕರ್ಫ್ಯೂ ಜಾರಿಗೆ ಬಂದಿದೆ. ಜನವರಿ 7ರ ತನಕ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಕರ್ನಾಟಕ ಸರ್ಕಾರ ಡಿಸೆಂಬರ್ 28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಿತ್ತು. ಮಂಗಳವಾರ ರಾತ್ರಿ 10 ಗಂಟೆಗೆ ನೈಟ್ ಕರ್ಫ್ಯೂ ಜಾರಿಗೆ ಬಂದಿದೆ.

ಎಲ್ಲಾ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಯಶಸ್ವಿಗೊಳಿಸಲು ಪೊಲೀಸರು ಸಿದ್ಧರಾಗಿದ್ದಾರೆ. ಮಂಗಳವಾರ ಮುಂಜಾನೆಯಿಂದಲೇ ಮೈಕ್‌ಗಳ ಮೂಲಕ ಈ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯ ನಡೆದಿತ್ತು.

Night Curfew Come Into Effect In Karnataka

ನೈಟ್ ಕರ್ಫ್ಯೂ ಅವಧಿಯಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಜನರ ಅನಗತ್ಯ ಸಂಚಾರವನ್ನು ಸಹ ನಿಷೇಧಿಸಲಾಗಿದ್ದು, ರಸ್ತೆ ರಸ್ತೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನೈಟ್ ಕರ್ಫ್ಯೂ ಅವಧಿಯಲ್ಲಿ ಸಂಚಾರ ನಡೆಸುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ರೈಲು, ಬಸ್, ವಿಮಾನ ಪ್ರಯಾಣಿಕರು ಟಿಕೆಟ್ ತೋರಿಸಿ ಸಂಚಾರ ನಡೆಸಲು ಅನುಮತಿ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಪೊಲೀಸರು ನೈಟ್ ಕರ್ಫ್ಯೂ ಜಾರಿಗೊಳಿಸಿದ ಹಿನ್ನಲೆಯಲ್ಲಿ ಪೊಲೀಸರು ಎಲ್ಲಾ ಫ್ಲೈ ಓವರ್‌ಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ.

ರಾಜ್ಯಾದ್ಯಂತ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಸಂಚಾರ ನಡೆಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾತ್ರಿ 8.30ರ ಸುಮಾರಿಗೆ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಧ್ವನಿ ವರ್ಧಕದ ಮೂಲಕ ಮಾಲೀಕರಿಗೆ ಮಾಹಿತಿ ನೀಡುತ್ತಿದ್ದರು. ಆಸ್ಪತ್ರೆ, ಔಷಧಿ ಅಂಗಡಿ, ಔಷಧಿ ತಯಾರಿಕೆ ಕಂಪನಿಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲು ಅನುಮತಿ ನೀಡಲಾಗಿದೆ.

English summary
10 days night curfew come to effect in Karnataka. Government announced night curfew will be in effect between December 28 to January 7, 2022 from 10 pm to 5 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X