ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೋಟೆಲ್ ಮಾಲೀಕರು ನಿರಾಳ; ನೈಟ್ ಕರ್ಫ್ಯೂ ಮಾರ್ಗಸೂಚಿ ಬದಲು!

|
Google Oneindia Kannada News

ಬೆಂಗಳೂರು, ಡಿಸೆಂಬರ್ 28; ಕರ್ನಾಟಕ ಸರ್ಕಾರ ಡಿಸೆಂಬರ್ 28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ನೈಟ್ ಕರ್ಫ್ಯೂ ಮಾರ್ಗಸೂಚಿ ಹೊರಡಿಸಿದ್ದ ಸರ್ಕಾರ ಹೋಟೆಲ್, ಬಾರ್, ರೆಸ್ಟೋರೆಂಟ್, ಪಬ್, ಮನರಂಜನಾ ತಾಣಗಳಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಿತ್ತು.

ಡಿ.28ರಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ, ಮಾರ್ಗಸೂಚಿಡಿ.28ರಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ, ಮಾರ್ಗಸೂಚಿ

ಹೊಸ ವರ್ಷದ ಸಂದರ್ಭದಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂಬ ಸರ್ಕಾರದ ಆದೇಶಕ್ಕೆ ಹೋಟೆಲ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ.

ಇಂದಿನಿಂದ ನೈಟ್ ಕರ್ಫ್ಯೂ : ಬೆಂಗಳೂರು ಪೊಲೀಸ್ ಕಮೀಷನರ್ ಹೇಳಿದ್ದೇನು? ಇಂದಿನಿಂದ ನೈಟ್ ಕರ್ಫ್ಯೂ : ಬೆಂಗಳೂರು ಪೊಲೀಸ್ ಕಮೀಷನರ್ ಹೇಳಿದ್ದೇನು?

Night Curfew Guidelines Clarification On Hotel 50 Per Cent Capacity

ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ ಮತ್ತು ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. ಇದರಿಂದಾಗಿ ಹೋಟೆಲ್ ಮಾಲೀಕರು ನಿರಾಳರಾಗಿದ್ದಾರೆ.

ನೈಟ್ ಕರ್ಫ್ಯೂ ಕ್ರಮಕ್ಕೆ ಸರ್ಕಾರದ ವಿರುದ್ಧ ಹೋಂಸ್ಟೇ, ರೆಸಾರ್ಟ್ ಮಾಲೀಕರ ಆಕ್ರೋಶನೈಟ್ ಕರ್ಫ್ಯೂ ಕ್ರಮಕ್ಕೆ ಸರ್ಕಾರದ ವಿರುದ್ಧ ಹೋಂಸ್ಟೇ, ರೆಸಾರ್ಟ್ ಮಾಲೀಕರ ಆಕ್ರೋಶ

ಪರಿಷ್ಕೃತ ಮಾರ್ಗಸೂಚಿ; ಮಂಗಳವಾರದ ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಆಹಾರ ಮತ್ತು ಪಾನೀಯ ಒದಗಿಸುವ ಸ್ಥಳಗಳಲ್ಲಿ ಮಾತ್ರ ಆಸನಗಳ ಶೇ 50ರಷ್ಟು ಸೇವೆ ನೀಡಬೇಕು.

ಉಳಿದಂತೆ ಹೋಟೆಲ್‌ಗಳಲ್ಲಿನ ಕೋಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ. ಕೋಣೆಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬಹುದಾಗಿದೆ. ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಹೋಟೆಲ್‌ಗಳಲ್ಲಿ ಜನದಟ್ಟಣೆ ಉಂಟಾಗಬಹುದು ಎಂದು ಡಿಸೆಂಬರ್ 30 ರಿಂದ ಜನವರಿಗೆ 2 ರ ತನಕ ಕೋವಿಡ್ ಮಾರ್ಗಸೂಚಿಗಳ ಅನ್ವಯ ಒಟ್ಟು ಆಸನಗಳ ಶೇ 50ರಷ್ಟನ್ನು ಮಾತ್ರ ಬಳಕೆ ಮಾಡಬೇಕು ಎಂದು ಹಿಂದಿನ ಆದೇಶದಲ್ಲಿ ತಿಳಿಸಲಾಗಿತ್ತು.

ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವ ನೈಟ್ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಜಾರಿಗೆ ಬರಲಿದೆ. ಡಿಸೆಂಬರ್ 28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಕ್ಕೆ ಪಬ್, ರೆಸಾರ್ಟ್, ಕ್ಲಬ್ ಮಾಲೀಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶೇ 50ರಷ್ಟು ಸೀಟುಗಳನ್ನು ಮಾತ್ರ ಭರ್ತಿ ಮಾಡಬೇಕು ಎಂಬ ಆದೇಶಕ್ಕೂ ವಿರೋಧ ವ್ಯಕ್ತವಾಗಿತ್ತು.

ನೈಟ್ ಕರ್ಫ್ಯೂ ಅವಧಿಯಲ್ಲಿ ಅನಗತ್ಯ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬೆಂಗಳೂರು ನಗರದ ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ತುರ್ತು ಸಂದರ್ಭದಲ್ಲಿ ಜನರು ಸಂಚಾರ ನಡೆಸಬಹುದಾಗಿದೆ. ಆಸ್ಪತ್ರೆ, ಮೆಡಿಕಲ್, ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯ ಬಳಿಕ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಯಿತು.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ನೈಟ್ ಕರ್ಫ್ಯೂವನ್ನು ಕಠಿಣವಾಗಿ ಜಾರಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಆದೇಶದಂತೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನೈಟ್ ಕರ್ಫ್ಯೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, "ಸಾರ್ವಜನಿಕ ಸ್ಥಳಗಳಲ್ಲಿ ಹೊಸವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 28 ರಿಂದ ಜನವರಿ 7ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ನೈಟ್ ಕರ್ಫ್ಯೂ ಅವಧಿಯಲ್ಲಿ ಸಂಚಾರ ನಡೆಸುವ ಜನರು ಗಸ್ತಿನಲ್ಲಿರುವ ಪೊಲೀಸರಿಗೆ ಸೂಕ್ತ ದಾಖಲೆ ತೋರಿಸಬೇಕು. ಕಂಪನಿಗಳ ಉದ್ಯೋಗಿಗಳು ಐಡಿ ಕಾರ್ಡ್ ಹೊಂದಿರಬೇಕು. ಬಸ್, ರೈಲು, ವಿಮಾನ ಪ್ರಯಾಣಿಕರು ಟಿಕೆಟ್ ತೋರಿಸಿ ಸಂಚಾರ ನಡೆಸಬೇಕಿದೆ.

Recommended Video

IndiGo ವಿಮಾನದಲ್ಲಿ ಕೇಳಿಬಂತು ತುಳುಭಾಷೆಯಲ್ಲಿ ಅನೌನ್ಸ್ಮೆಂಟ್ | Oneindia Kannada

English summary
Karnataka government announced night curfew from December 28. Here is clarification on hotel operations with 50 per cent capacity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X