HD Kumaraswamy health: ಎಚ್‌ ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಪುತ್ರ ನಿಖಿಲ್‌

ಬೆಂಗಳೂರು, ಆಗಸ್ಟ್‌ 31: ತೀವ್ರ ಜ್ವರದಿಂದ ಬಳಲಿದ ಪರಿಣಾಮ ಸಣ್ಣ ಪ್ರಮಾಣದ ಸ್ಟ್ರೋಕ್‌ಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.

Nikhil Gave Information About Former CM HD Kumaraswamys Health

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ. ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+