A Khata: "ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ದಂಧೆ"

ರಾಮನಗರ, ಅಕ್ಟೋಬರ್‌ 27: ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್ ಆರ್ ವ್ಯಾಲ್ಯೂ ಮೇಲೆ ದರ ಪಿಕ್ಸ್ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.

Nikhil Kumaraswamy A Scam Worth One Lakh Crore Is going on in the name of account conversion

ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡ್ತವೆ. ಅದಕ್ಕೆ 100 ದಿನ ಟೈಂ ಲೈನ್ ಪಿಕ್ಸ್ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್ ಆರ್ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್ಸ್ ಕೊಡ್ತಾವ್ರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು; ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ಕೊಟ್ಟಂತ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನ ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡ್ತೀವಿ ಎಂದು ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ಮುಂದೆ ಜೆಡಿಎಸ್ 8ರಿಂದ 9 ಸ್ಥಾನ ಬರುತ್ತೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ನುಡಿಯೋಕೆ ಅವರ‌್ಯಾರು, ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡ್ತಾರೆ. ಭವಿಷ್ಯ ಹೇಳೋಕೆ ಅವರೇನು ಜ್ಯೋತಿಷ್ಯೀನಾ.? ಅವರು ಭವಿಷ್ಯ ನುಡಿಯಲಿ ಟೈಂ ಬಂದಾಗ ಮಾತಾಡ್ತೀವಿ ಎಂದು ಡಿಕೆ ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡ್ತೀವಿ ಅಂತ ಹೇಳಿ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10ಕೋಟಿ ಅನುದಾನವೂ ಸಿಕ್ಕಿಲ್ಲ. ಬಿಜೆಪಿ-ಜೆಡಿಎಸ್ ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಕಂಟ್ರಾಕ್ಟರ್ ಗಳು ಕಥೆ ಏನಾಗಿದೆ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು. ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+