Nikhil Kumaraswamy: ರಾಮನಗರ ಬಿಟ್ಟು ಬೇರೆ ಕ್ಷೇತ್ರದ ಪ್ರಶ್ನೆಯೇ ಇಲ್ಲ; 2028ಕ್ಕೆ ನಿಖಿಲ್ ಕುಮಾರಸ್ವಾಮಿ ಫಿಕ್ಸ್!

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ರಾಮನಗರದಿಂದ ಸ್ಪರ್ಧಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ.

ರಾಮನಗರದಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ನಿಖಿಲ್, ಈ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದರು.

Nikhil Kumaraswamy Confirms Ramanagara as His 2028 Assembly Election Sets Sights on JDS Party Victory

2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಎದುರಾದ ಸೋಲಿನ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಲ್ಲಿ ಇನ್ನೂ ಇದೆ. ಮುಂಬರುವ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ಆ ನೋವನ್ನು ಮರೆಸಬೇಕು. ಇದರೊಂದಿಗೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಅಗತ್ಯವಿದೆ ಎಂದು ನಿಖಿಲ್ ಹೇಳಿದ್ದಾರೆ.

ನಾಲ್ಕೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲ್ಲಿಸುವ ಗುರಿ

ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‌ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದಾಗಿ ತಿಳಿಸಿದ ನಿಖಿಲ್, ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರನ್ನು ಕಾಣುವುದು ತಮ್ಮ ಗುರಿ ಎಂದು ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡುವ ಮೂಲಕ ಸಂಘಟನೆ ಬಲಪಡಿಸುವ ಕೆಲಸ ನಡೆಯಲಿದೆ ಎಂದಿದ್ದಾರೆ.

ಇದೇ ವೇಳೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳನ್ನು ಆಲಿಸುವುದಾಗಿಯೂ ನಿಖಿಲ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

ರಾಮನಗರದ ನೂತನ ಜೆಡಿಎಸ್ ಕಚೇರಿಗೆ ಇಂದು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಕಳೆದ 15 ದಿನಗಳ ಹಿಂದೆ ನೂತನವಾಗಿ ಆರಂಭವಾಗಿರುವ ಈ ಕಚೇರಿಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸುವ ಕುರಿತು ವಿಸ್ತೃತ ಸಮಾಲೋಚನೆ ನಡೆಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿದೆ. ಪಕ್ಷದ ಸಂಘಟನೆಗಾಗಿ ದುಡಿದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು. ಈ ಕಚೇರಿಯ ಮೂಲಕ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ

ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ" ಎಂದು ಅಭಿಪ್ರಾಯಪಟ್ಟರು.

Nikhil Kumaraswamy: ಶೀಘ್ರದಲ್ಲೇ ರಾಜ್ಯ ಪ್ರವಾಸ: ರೈತರ ಸಮಸ್ಯೆ ಆಲಿಕೆ

ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳುವ ಕುರಿತು ಮಾತನಾಡಿದ ಅವರು, ಶೀಘ್ರದಲ್ಲೇ ರಾಜ್ಯ ಪ್ರವಾಸದ ಬಗ್ಗೆ ತೀರ್ಮಾನ ಮಾಡುತ್ತೇನೆ. ಸರ್ಕಾರ ಬಂದು ಮೂರು ವರ್ಷವಾದರೂ ರೈತರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಸರ್ಕಾರ ಕೇವಲ 102 ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ, ಉಳಿದ ತಾಲೂಕುಗಳಲ್ಲಿ ಬರ ಇಲ್ಲವೇ? ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ಹೇಳಿದರು.

ಕುಮಾರಣ್ಣ ವಿರುದ್ಧ ಸಚಿವ ಬಾಲಕೃಷ್ಣ ಅವರ ಟೀಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಹೇಳಿಕೆಗಳಿಗೆ ಉತ್ತರ ಕೊಡುವುದಿಲ್ಲ. ಕುಮಾರಣ್ಣನವರನ್ನು ನಿಂದಿಸಿದರೆ ಕೆಲವರಿಗೆ ಸ್ಥಾನ-ಮಾನ ಸಿಗುತ್ತದೆ. ಇದು ಜೆನ್-ಝಿ ಯುಗ, ಜನರು ಎಲ್ಲವನ್ನೂ ಗಮನಿಸುತ್ತಾರೆ. ಅಧಿಕಾರದಲ್ಲಿರುವವರು ಮೈಕ್ ಮೂಲಕವಲ್ಲ, ಕೆಲಸದ ಮೂಲಕ ಉತ್ತರ ಕೊಡಬೇಕು ಎಂದರು.

Nikhil Kumaraswamy: ಗಣೇಶ ಹಬ್ಬದ ಡಿಜೆ ವಿವಾದ

ಟಿ.ನರಸೀಪುರ ಹಾಗೂ ಮದ್ದೂರು ಪ್ರಕರಣಗಳ ಕುರಿತು ಮಾತನಾಡಿ, ಸರ್ಕಾರ ಒಂದು ಸಮುದಾಯವನ್ನು ಓಲೈಕೆ ಮಾಡಬಾರದು. ಹಿಂದೂ ಸಂಸ್ಕೃತಿ ಮತ್ತು ಆಚರಣೆಗೆ ಅಡ್ಡಿಪಡಿಸುವುದು ಸರಿಯಲ್ಲ. ಧಾರ್ಮಿಕ ನಂಬಿಕೆಗೆ ಧಕ್ಕೆ ಆಗದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+