"50 ಕೋಟಿ ರೂ ಕೊಟ್ಟು ಶಾಸಕ ಖರೀದಿಗೆ ಕಾಂಗ್ರೆಸ್ ಸಿದ್ಧ"
ರಾಯಚೂರು, ನವೆಂಬರ್ 25: ಆಂಧ್ರ- ತೆಲಂಗಾಣ ಭಾಗಕ್ಕೆ ಶೇ.33ರಷ್ಟು ನೀರು ಹೋಗುತ್ತೆ. ಆದರೂ ಅಲ್ಲಿನ ರೈತರಿಗೆ ನೀರು ಕೊಡಬಹುದು. ಆದ್ರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ. ತುಂಗಾಭದ್ರಾ ಕ್ರಸ್ಟ್ ಗೇಟ್ ರಿಪೇರಿಗೆ 11ಕೋಟಿ ರೂ.ಕೊಡಲು ಈ ಸರ್ಕಾರಕ್ಕೆ ಶಕ್ತಿ ಇಲ್ಲ. 50 ಕೋಟಿ ರೂ. ಶಾಸಕರಿಗೆ ಕೊಟ್ಟು ಖರೀದಿಗೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಗುಡುಗಿದರು.
ಸಿಂಧನೂರಿನ ಎಪಿಎಂಸಿ ಆವರಣದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ 4 ಜಿಲ್ಲೆಯ ರೈತರ ಬದುಕು ಬೀದಿಗೆ ಬಂದಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಇದು ದಪ್ಪ ಚರ್ಮದ ಸರ್ಕಾರ. ರೈತರಿಗೆ ಬೇಕಿರೋದು ನಿಮ್ಮ ಗ್ಯಾರಂಟಿಗಳಲ್ಲ, ಅವರಿಗೆ ನೀರು ಕೊಡಿ ಅವರೇ ನಿಮ್ಮ ಗ್ಯಾರಂಟಿಗಳಿಗೆ ಹಣ ಕೊಡ್ತಾರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 8 ರಿಂದ 10 ದಿನಗಳ ಕಾಲ ಗಡುವು ನೀಡುತಿದ್ದೇವೆ. ಒಂದು ವೇಳೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೇ ತುಂಗಭದ್ರಾ ಆಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು. ತುಂಗಭದ್ರಾ ನದಿ ಈ ಭಾಗದ ಜೀವನಾಡಿ. ರೈತರು ಭೂಮಿ ತಾಯಿಯನ್ನ ಮಾತ್ರ ನಂಬಿ ಬದುಕುತ್ತಿದ್ದಾನೆ. ಈ ಸರ್ಕಾರ ರೈತನ ಬದುಕು ಕಸಿದುಕೊಳ್ಳಲು ಮುಂದಾಗಿದೆ. ಡ್ಯಾಂನಲ್ಲಿ 70 ಟಿಎಂಸಿ ನೀರಿದೆ. ಕುಮಾರಣ್ಣ ಸಿಎಂ ಆಗಿದ್ದ ವೇಳೆ 70 ಟಿಎಂಸಿಗೂ ಕಡಿಮೆ ನೀರು ಇತ್ತು. ಆಗ ರೈತರ ಎರಡು ಬೆಳೆಗೆ ನೀರು ಕೊಟ್ಟರು ಎಂದು ಹೇಳಿದರು.
ಸರ್ಕಾರ ತನ್ನ ತಪ್ಪನ್ನು ಮುಚ್ಚಿಟ್ಟುಕೊಳ್ಳುವ ಮೂಲಕ ಎರಡನೇ ಬೆಳೆಗೆ ನೀರಿಲ್ಲ ಎಂದು ರೈತರ ದಾರಿ ತಪ್ಪಿಸುವ ಕೆಲಸ ಮಾಡಿದೆ. ಜಲಸಂಪನ್ಮೂಲ ಸಚಿವರು,ಉಸ್ತುವಾರಿ ಮಂತ್ರಿಗಳು , ಅಧಿಕಾರಿಗಳು ಸ್ಥಳಕ್ಕೆ ಬಂದು ರೈತರಿಗೆ ನ್ಯಾಯ ಕೊಡುವವರೆಗೆ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು. ಜನತಾದಳ ಪಕ್ಷ ರೈತರ ಪಕ್ಷ. ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಕೊನೆಯ ಉಸಿರು ಇರುವವರೆಗೆ ರೈತರಿಗಾಗಿ ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹನುಮಂತಪ್ಪ ಆಲ್ಕೋಡ ಅವರು, ಸುರೇಶ್ ಬಾಬು , ಶರಣಗೌಡ ಕಂದಕೂರು, ನೇಮಿರಾಜ್ ನಾಯ್ಕ್ , ಕರೆಮ್ಮ ಜೆ. ನಾಯ್ಕ್ , ಜೆ.ಕೆ. ಕೃಷ್ಣ ರೆಡ್ಡಿ, ರಾಜಾ ವೆಂಕಟಪ್ಪ ನಾಯಕ್ ಅವರು, ಸಿ.ವಿ. ಚಂದ್ರಶೇಖರ್, ಮಹಾಂತೇಶ್ ಪಾಟೀಲ್, ಸಿದ್ದು ಬಂಡಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ರೈತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications