ಪ್ರತಿ ಎಕರೆಗೆ 50,000 ರೂ ಪರಿಹಾರ; ಮೆಕ್ಕೆಜೋಳ, ಭತ್ತ ಖರೀದಿಗೆ ಒತ್ತಾಯ!
ಬೆಂಗಳೂರು, ನವೆಂಬರ್ 25: ತುಂಗಭದ್ರಾ ಡ್ಯಾಮ್ ನಿಂದ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ, ತುಂಗಭದ್ರಾ ಡ್ಯಾಮ್ ಗೇಟ್ ಅಳವಡಿಕೆ ವಿಳಂಬ ಧೋರಣೆ ಖಂಡಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸಾವಿರಾರು ರೈತರ ನೇತೃತ್ವದಲ್ಲಿ ಇಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಯಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಂಗಭದ್ರಾ ಜಲಾಶಯ ವ್ಯಾಪ್ತಿಯ 4 ಜಿಲ್ಲೆಗಳ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ ಪ್ರತಿ ಎಕರೆಗೆ 50,000 ರೂ.ಪರಿಹಾರ ನೀಡಬೇಕು. ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಗಳನ್ನ ತೆರೆಯ ಬೇಕೆಂದು ರೈತರ ಜತೆ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಅತಿವೃಷ್ಟಿಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇನ್ನು ಸಂಕಷ್ಟದಲ್ಲಿರುವ ರೈತರ ಎರಡನೇ ಬೆಳೆಗೂ ನೀರು ಅಂದ್ರೆ ಹೇಗೆ.? ರೈತರ ಸಮಸ್ಯೆಗಳಿಗೆ ಈ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ ಎಂದು ಇದರಿಂದ ಸಿಂಧೂರಿನ ಕೋಟೆ ಈರಣ್ಣ ದೇವಸ್ಥಾನ ಎಪಿಎಂಸಿ ಆವರಣದ ವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದೆ. ಭತ್ತದ ದರವು ಕುಸಿದಿದೆ. ಸರ್ಕಾರ ಈವರೆಗೂ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರ ಗಮನಕ್ಕೆ ತರುವುದಾಗಿ ತಿಳಿಸಿದರು.
ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಈ ನಾಲ್ಕು ಜಿಲ್ಲೆಗಳ 10 ಲಕ್ಷ ಎಕರೆ ಜಮೀನು ಬದುಕೇ ತುಂಗಭದ್ರಾ ಜಲಾಶಯದ ಮೇಲೆ ನಿಂತಿದೆ. ಜಲಾಶಯದ ಕ್ರಸ್ಟ್ ಕಿತ್ತು ಹೋಗಿದ್ದರಿಂದ ಸಾವಿರಾರು ಕ್ಯೂಸೆಕ್ ನೀರು ಸಮುದ್ರ ಪಾಲಾಗಿದೆ. ಇದ್ರಿಂದ ನಾವು ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ನಿಖಿಲ್ ಅವರ ಹೇಳಿದರು
ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ ಐದು ಲಕ್ಷ ಕೋಟಿ ಹೆಚ್ಚು ಸಾಲ ಮಾಡಿದೆ. ಇದು ಕಾಂಗ್ರೆಸ್ ಆಡಳಿತ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಗ್ಯಾರಂಟಿ, ಗ್ಯಾರಂಟಿ ಅಂತಾರೆ ಅದನ್ನ ಕೂಡ ಸರಿಯಾಗಿ ಕೊಟ್ಟಿಲ್ಲ.ಯುವನಿಧಿ ಕೊಟ್ಟಿದ್ದಿರಾ? ಚುನಾವಣೆ ಸಂದರ್ಭದಲ್ಲಿ ಮಾತ್ರ ದುಡ್ಡು ಬಿಡುಗಡೆ ಮಾಡ್ತರೆ. ಈ ಸರ್ಕಾರದಲ್ಲಿ ಬಡವರು ಬದಕಲು ಆಗ್ತಿಲ್ಲ ಎಂದು ಕಿಡಿಕಾರಿದರು.
ನಮ್ಮ ಪಕ್ಷದ ಬಗ್ಗೆ ಕಲಾಪದಲ್ಲಿ ಕೀಳಾಗಿ ಮಾತನಾಡಿದ್ರು. ಜೆಡಿಎಸ್ 18 ಸೀಟ್ ಮುಂದೆ ಸಿಂಗಲ್ ಡಿಜಿಟ್ ಗೆ ಬರುತ್ತೆ ಅಸ್ತಿತ್ವ ಇಲ್ಲ ಅಂತ ಲೇವಡಿ ಮಾಡಿದ್ರು. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.?
ಅಲ್ಲಿನ ಜನರು ಕಾಂಗ್ರೆಸ್ ಪರಿಸ್ಥಿತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಂಡವಾಳ ಇದ್ದಿದ್ದಕ್ಕೆ ಕುಮಾರಸ್ವಾಮಿಗೆ ರೆಡ್ ಕಾರ್ಪೆಟ್ ಹಾಕಿ ಎನ್.ಡಿ.ಎ ಗೆ ಸೇರಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರಪ್ಪನಾಣೆ ಗೆಲ್ಲಲ್ಲ ಅಂತಾ ಕಾಂಗ್ರೆಸ್ ನವರು ಭಾಷಣ ಬಿಗಿದ್ರು. ಆದ್ರೆ ಮಂಡ್ಯ ಜನರ ಆಶೀರ್ವಾದದಿಂದ ದಾಖಲೆ ಗೆಲುವು ಸಿಕ್ತು. ಬಂಡವಾಳ ಇರೋದಕ್ಕೆ ಕುಮಾರಣ್ಣನ ಗೆಲ್ಲಿಸಿರೋದು ಎಂದು ಹೇಳಿದರು.
ಮದ್ದೂರು ತಾಲ್ಲೂಕಿನಲ್ಲಿ ಪೊಲೀಸ್ ಠಾಣೆ ಇವರಪ್ಪನ ಮನೆನಾ? ಇಲ್ಲಿರುವ ಶಾಸಕರ ನಡವಳಿಕೆ ಸರಿಯಿಲ್ಲ. ಜಿಲ್ಲೆಯ ಶಾಸಕರು ಡಿಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ. ಮಂಡ್ಯ ಜಿಲ್ಲೆಗೆ ಅವರು ಏನು ಬಿರುದು ಕೊಟ್ಟರು? ಛತ್ರಿಗಳು ಅಂದ್ರು ಅದರ ಅರ್ಥ ತಿಳಿದಿಕೊಳ್ಳಬೇಕು. ಜೆಡಿಎಸ್ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ತಾರೆ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.
ಕುಮಾರಣ್ಣ ಸಿಎಂ ಬಗ್ಗೆ ಚಲುವರಾಯಸ್ವಾಮಿ ಅವರಿಗೆ ಯಾಕೆ ಆತಂಕ ಶುರುವಾಗಿದೆ. ಇನ್ನೂ ಚುನಾವಣೆ ಎರಡೂವರೆ ವರ್ಷ ಇದೆ. ಯಾವ ನಾಯಕತ್ವದಲ್ಲಿ ಚುನಾವಣೆ ನಡೆಯಬೇಕು ಅಂತ ಎನ್‌ಡಿಎ ತೀರ್ಮಾನ ಮಾಡುತ್ತೆ.ಕುಮಾರಣ್ಣ ಅರ್ಜಿ ಹಾಕೊಂಡು ಹೋಗಿಲ್ಲ, ಸ್ವಾಭಿಮಾನದಿಂದ ಬದುಕಿದ್ದಾರೆ. ಎರಡೂ ಪಕ್ಷದ ನಾಯಕರು ಅದರ ಬಗ್ಗೆ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.












Click it and Unblock the Notifications