ರಾಜ್ಯದಲ್ಲಿ ನಿರಂತರ ಮಳೆಗೆ ಬೆಳೆ ಹಾನಿ: ರೈತರ ಸಾಲ ಮನ್ನಾ...
ಬೆಂಗಳೂರು, ಸೆಪ್ಟೆಂಬರ್ 15: ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಪ್ರವಾಸ ಮಾಡಲಿದ್ದಾರೆ. ಇಂದು ಕಲಬುರಗಿ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಕಲಬುರಗಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಸೋಮನಾಥಹಳ್ಳಿ.ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳದ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟದಿಂದ ರೈತರು ಕಣ್ಣೀರಿಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೇ ಉಸ್ತುವಾರಿ ಮಂತ್ರಿಗಳು ಇಡೀ ಸರ್ಕಾರ ಕಾಣೆಯಾಗಿದೆ. ಜಿಲ್ಲೆಗಳಿಗೆ ತೆರಳಿ ನಿರಾಶ್ರಿತರಿಗೆ ಪರಿಹಾರ ಕಲ್ಪಿಸಿ ಎಂದು ನಿಖಿಲ್ ಅವರು ಸರ್ಕಾರಕ್ಕೆ ಒತ್ತಾಹಿಸಲಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿ ಈ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ನಂತರ ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅದರ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ "ವ್ಯಾಪಕ ಬೆಳೆ ಹಾನಿ" ಸಂಭವಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಇಷ್ಟದರೂ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡುವುದು ಬಿಟ್ಟರೆ ಬೇರೆ ಏನು ಮಾಡಿಲ್ಲ. ರಾಜ್ಯದಿಂದ ಕೃಷಿ ಸಚಿವರು ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಕೃಷಿ ಸಚಿವರು ರೈತರ ಸಂಕಷ್ಟವನ್ನು ಆಲಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಒಂದೇ ಒಂದು ಪ್ರದೇಶಕ್ಕೂ ಸಿಎಂ ಇದುವರೆಗೂ ಭೇಟಿ ನೀಡಿಲ್ಲ.ರಾಜ್ಯದ ಕೃಷಿ ಸಚಿವರಂತೂ ಅವರ ಮತಕ್ಷೇತ್ರ ಬಿಟ್ಟು ಹೊರಗೆ ಬಂದೇ ಇಲ್ಲ. ಕಲಬುರಗಿ ಜಿಲ್ಲೆಗಳನ್ನ ಕೃಷಿ ಸಚಿವರು ಮರತೇ ಬಿಟ್ಟಿದ್ದಾರೆ.ಈ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದರೂ ಸಹ ಕೃಷಿ ಸಚಿವರು ಭೇಟಿ ನೀಡಿಲ್ಲ ಎಂದು ರಾಜ್ಯ ಕೃಷಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.
ಕಲಬುರಗಿಯಲ್ಲಿ ಒಂದು ಲಕ್ಷದ ಐದು ಸಾವಿರ ಹೆಕ್ಟರ್ ಪ್ರದೇಶ ಹನಿಗೋಳಗಾಗಿದೆ. ಅದರಲ್ಲಿ 58 ಸಾವಿರ ಹೆಕ್ಟರ್ ತೊಗರಿ ಪ್ರದೇಶ ಹಾನಿಯಾಗಿದೆ. ಹತ್ತಿ, ಸೋಯಾಬಿನ್ ಅನೇಕ ಬೆಳೆಗಳು ನಾಶವಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ 50% ಬೆಳೆ ಹಾನಿಯಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್ ಪಕ್ಷಕ್ಕೆ ಅಧಿಕಾರ ಇರಲಿ ಬಿಡಲಿ ರೈತರ ಪರವಾಗಿ ನಮ್ಮ ಬದ್ಧತೆಯನ್ನು ತೋರಿಸಿದ್ದೇವೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಕೆಕೆಆರ್ ಡಿ ಬಿ ವತಿಯಿಂದ ಐದು ಸಾವಿರ ಕೋಟಿ ಹಣ ಅಭಿವೃದ್ಧಿ ಮಾಡಲು ಮೀಸಲಿಟ್ಟಿದ್ದೇವೆ ಎಂದು ಭಾಷಣ ಮಾಡುತ್ತಾರೆ. ಇಂತಹ ಸಮಯದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಗಳನ್ನು ನೀಡುವುದರ ಮೂಲಕ ರೈತರ ಸಾಲದ ಹೊರೆಯನ್ನ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
NDRF ನಿಯಮ ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಪ್ರಿಯಾಂಕಾ ಖರ್ಗೆ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ಈ ವಿಚಾರದಲ್ಲಿ ಆ ಸರಕಾರ ಈ ಸರಕಾರ ಎನ್ನದೇ ಹಾನಿಗೊಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ಕೊಡಬೇಕಿದೆ. ಈ ದಿಕ್ಕಿನಲ್ಲಿ ಎಲ್ಲರೂ ಒಂದಾಗಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿಕಾರಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications