Get Updates
Get notified of breaking news, exclusive insights, and must-see stories!

ಸಿನಿಮಾ ಮತ್ತು ರಾಜಕಾರಣ; ಸ್ಪಷ್ಟನೆ ಕೊಟ್ಟ ನಿಖಿಲ್‌!

ಬೆಂಗಳೂರು, ಆಗಸ್ಟ್‌ 30; ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ, ರಾಮನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಸೋಲಿಬ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರವಾದರೆ. ಅವರು ಸಿನಿಮಾದ ಕಡೆ ಹೆಚ್ಚು ತೊಡಗಿಸಿಕೊಳ್ಳುವರೇ ಎಂಬುದು ಎರಡು ದಿನಗಳಿಂದ ಚರ್ಚೆಯ ವಿಚಾರ. ಈ ಬಾರಿಯ ಚುನಾವಣೆಯಲ್ಲಿ ಅವರು ರಾಮನಗರದಲ್ಲಿ 76,975 ಮತಗಳನ್ನು ಪಡೆದು ಸೋಲು ಕಂಡಿದ್ದರು.

ಬುಧವಾರ ಫೇಸ್‌ಬುಕ್ ಪೋಸ್ಟ್‌ ಒಂದನ್ನು ನಿಖಿಲ್ ಕುಮಾರಸ್ವಾಮಿ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸಿನಿಮಾ ಮತ್ತು ರಾಜಕೀಯದ ಬಗ್ಗೆ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸ್ಪಷ್ಟನೆಯನ್ನು ನೀಡಿದ್ದಾರೆ.

Nikhil Kumaraswamy Facebook Post Clarification On Film And Politics

ಫೇಸ್‌ಬುಕ್ ಪೋಸ್ಟ್‌ ಹೀಗಿದೆ

'ಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ'

'ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ'

'ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ'

'ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ'

'ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ' ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸ್ಪಷ್ಟನೆ ಕೊಟ್ಟಿದ್ದು ಏಕೆ?; ನಿಖಿಲ್ ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದು ಏಕೆ? ಎಂಬುದು ಎಲ್ಲರ ಪ್ರಶ್ನೆ. ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ಎಚ್. ಡಿ. ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದ್ದರು.

ಆಗ, "ನಿಖಿಲ್‌ಗೆ ಸದ್ಯ ರಾಜಕೀಯದ ಸಹವಾಸಕ್ಕೆ ಹೋಗಬೇಡ ಎಂದಿದ್ದೇನೆ. ಕಲಾವಿದನಾಗಿ ಬದುಕು ರೂಪಿಸಿಕೋ ಎಂದು ಹೇಳಿದ್ದೇನೆ. ಇನ್ನೂ 5 ವರ್ಷಗಳ ಕಾಲ ಚುನಾವಣೆಗೆ ನಿಲ್ಲುವುದಿಲ್ಲ" ಎಂದು ಹೇಳಿದ್ದರು.

"ದಯವಿಟ್ಟು ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಹೀಗಾಗಿ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ" ಎಂದು ಕುಮಾರಸ್ವಾಮಿ ತಿಳಿಸಿದ್ದರು.

"ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾನೆ. ಈಗಾಗಲೇ ಎರಡು ಬಾರಿ ನಿಖಿಲ್ ಸೋತಿದ್ದಾನೆ. ಮಂಡ್ಯ ಎಂಪಿ ಎಲೆಕ್ಷನ್‌ಗೆ ನಿಲ್ಲುವಾಗಲೂ ಬೇಡ ಎಂದು ಹೇಳಿದ್ದೆ" ಎಂದು ಎಚ್. ಡಿ. ಕುಮಾರಸ್ವಾಮಿ ಮಾತನಾಡಿದ್ದರು.

ಕುಮಾರಸ್ವಾಮಿ ಹೇಳಿಕೆ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜಕಾರಣದಿಂದ ದೂರವಾದರೇ?, ಅವರು ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಎಂಬ ವಿಶ್ಲೇಷಣೆಗಳು ಕೇಳಿ ಬಂದಿದ್ದವು. ಆದ್ದರಿಂದ ನಿಖಿಲ್ ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ 2018ರ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಣೆ ಮಾಡಿದ್ದರು. ಚುನಾವಣೆ ಎದುರಿಸಿದ ನಿಖಿಲ್ 76,975 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಕಣಕ್ಕಿಳಿದು ನಿಖಿಲ್ ಕುಮಾರಸ್ವಾಮಿ ಸೋತಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+