HD Kumaraswamy: ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಾಹಿತಿ

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಆದ ಬಳಿಕ ಮಾಧ್ಯಮಗೋಷ್ಟಿಯನ್ನು ಅರ್ಧಕ್ಕೆ ನಿಲ್ಲಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು, ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಯಾಗಿತ್ತು, ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ರಕ್ತಸ್ರಾವ ನಿಂತಿದ್ದು ಆತಂಕ ಪಡುವ ಅಗತ್ಯವಿಲ್ಲ. ಅವರ ಆರೋಗ್ಯಕ್ಕೆ ಏನೂ ತೊಂದರೆ ಇಲ್ಲ ಎಂದು ಅಪೋಲೊ ಆಸ್ಪತ್ರೆ ವೈದ್ಯರು ಹೇಳಿರುವುದಾಗಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Nikhil Kumaraswamy gives update about HD Kumaraswamy

ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯ ವೈದ್ಯರು ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ಯತೀಶ್ ಮತ್ತು ವೈದ್ಯರ ತಂಡ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತಸ್ರಾವ ನಿಂತಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಅವರ ಆರೋಗ್ಯಕ್ಕೆ ಯಾವುದೇ ಗಂಭೀರ ಸಮಸ್ಯೆಯಾಗಿಲ್ಲ, ಅವರು ವಿಶ್ರಾಂತಿ ಪಡೆಯಬೇಕು, ಸ್ಟ್ರೋಕ್ ಆಗಿದ್ದರಿಂದ ರಕ್ತ ಹೆಚ್ಚುಗಟ್ಟದಂತೆ ಮಾತ್ರೆ ತೆಗೆದುಕೊಳ್ಳುತ್ತಿದ್ದು, ಅದರಿಂದಾಗಿ ರಕ್ತಸ್ರಾವವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ರಕ್ತಸ್ರಾವ ಆದಾಗ ಜೊತೆಯಲ್ಲೇ ಇದ್ದ ನಿಖಿಲ್ ಕುಮಾರಸ್ವಾಮಿ ಕೂಡಲೇ ತಂದೆಯ ಜೊತೆ ಅಪೊಲೋ ಆಸ್ಪತ್ರೆಗೆ ಬಂದಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರೂ ಆತಂಕಪಡುವ ಅಗತ್ಯವಿಲ್ಲ, ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆಯಲು ಆಗದ ಕಾರಣ, ರಕ್ತಸ್ರಾವವಾಗಿದೆ. ಅವರ ಮೇಲೆ ಜನಾಶೀರ್ವಾದ ಇದ್ದು, ಏನೂ ತೊಂದರೆ ಆಗಿಲ್ಲ ಎಂದರು.

ಕೇಂದ್ರ ಸಚಿವರಾದ ಬಳಿಕ ಆರೋಗ್ಯವನ್ನು ಲೆಕ್ಕಿಸದೇ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗುತ್ತದೆ. ರಾಜ್ಯದ ಜನರಿಗೆ ಏನಾದರೂ ನೀಡಬೇಕು ಎಂದು ಕೆಲಸ ಮಾಡುತ್ತಿದ್ದಾರೆ, ದೇವರನ್ನು ನಂಬಿದ್ದೇವೆ, ರೈತರು, ಜನರ ಆಶೀರ್ವಾದ ಕುಮಾರಣ್ಣನ ಮೇಲೆ ಇದ್ದು ಏನೂ ಆಗಲ್ಲ ಎಂದರು.

ವೈದ್ಯರು ಎಲ್ಲಾ ರೀತಿ ಪರೀಕ್ಷೆ ಮಾಡುತ್ತಿದ್ದು, ಇಂದು ರಾತ್ರಿಯೇ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ನಿರಂತರ ಓಡಾಟ ಮತ್ತು ಬಿಡುವಿಲ್ಲದ ಕೆಲಸದಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+