Nikhil Kumaraswamy: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾತ್ರ, ಈ ವಿಚಾರದಲ್ಲಿ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ
Nikhil Kumaraswamy: ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿರುವ ಹಾಗೂ ಪ್ರಾದೇಶಿಕ ಪಕ್ಷವಾದ ಜಾತ್ಯಾತೀತ ಜನತಾದಳ ಬಿಜೆಪಿಯೊಂದಿಗೆ (ಎನ್‌ಡಿಎ ಮೈತ್ರಿಕೂಟವನ್ನು) ಸೇರಿದೆ. ಇದಾದ ನಂತರ ಕರ್ನಾಟಕದಲ್ಲಿ ಮುಸ್ಲಿಂ ನಾಯಕರು ಹಾಗೂ ರಾಜಕಾರಣಿಗಳು, ಮತದಾರರು ಸಹ ಜೆಡಿಎಸ್‌ನಿಂದ ದೂರ ಸರಿದಿದ್ದಾರೆ. ಆದರೆ, ಇದೀಗ ಜೆಡಿಎಸ್ ತನ್ನ ನಿಲುವು ಬದಲಾಯಿಸುತ್ತಿದೆ.
ಅದರಲ್ಲೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ನಂತರ ಬಿಜೆಪಿ - ಜೆಡಿಎಸ್ ಮುಸ್ಲಿಂ ಮತದಾರರು ಹಾಗೂ ನಾಯಕರನ್ನು ಸೆಳೆಯುವ ತೆರೆಮರೆಯ ಕಸರತ್ತು ಪ್ರಾರಂಭಿಸಿದೆ. ಈ ನಡುವೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಎನ್‌ಡಿಎಯೊಂದಿಗೆ ಜೆಡಿಎಸ್ ಪಕ್ಷವು ಮೈತ್ರಿ ಮಾಡಿಕೊಂಡ ನಂತರ ಪಕ್ಷವು ಜಾತ್ಯಾತೀತವಾಗಿಲ್ಲ ಎಂಬ ಟೀಕೆಗಳು ಕೇಳಿ ಬರುತ್ತಿವೆ. ಅಲ್ಲದೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಮೌನ ತೆಳೆದಿದೆ. ಈ ಆರೋಪಗಳ ನಡುವೆಯೇ ಎಂದೆಂದಿಗೂ ಜಾತ್ಯತೀತ ಪಕ್ಷವಾಗಿಯೇ ಉಳಿಯಲಿದೆ ಎಂಬ ಸಂದೇಶ ರವಾನಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಮುಸ್ಲಿಂ ಮತದಾರರು ಹಾಗೂ ನಾಯಕರು ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದಾರೆ. ಇದೇ ವಿಷಯವನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ಬಿಜೆಪಿ - ಜೆಡಿಎಸ್ ಮುಂದಾಗಿರುವಂತಿದೆ.
ಇದೀಗ ಜಾತ್ಯಾತೀತ ವಿಚಾರದ ಬಗ್ಗೆ ಮಾತನಾಡಿರುವ ಜೆಡಿಎಸ್ ಪಕ್ಷದ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಬಗ್ಗೆ ಇಂದಿಗೂ ಕಾರ್ಯಕರ್ತರಲ್ಲಿ ಅಪಸ್ವರಗಳಿವೆ. ಮೈತ್ರಿಯ ಕುರಿತು ಸಾಕಷ್ಟು ಸ್ಪಷ್ಟನೆ ಕೊಟ್ಟಿದ್ದರೂ ಗ್ರಾಮೀಣ ಭಾಗದಲ್ಲಿ ಭಿನ್ನದನಿ ಬದಲಾಗಿಲ್ಲ ಎಂದು ಹೇಳಲಾಗಿದೆ.
ಜಾತ್ಯತೀತ ಜನತಾದಳ ಎನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಾವು ಬಿಜೆಪಿಯೊಂದಿಗೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ ನಿಜ. ಆದರೆ, ನಾವು - ನಮ್ಮ ಸಿದ್ಧಾಂತವನ್ನು ಯಾರೊಂದಿಗೂ ಅಡ್ಜಸ್ಟ್ ಮಾಡಿಕೊಂಡಿಲ್ಲ. ನಮ್ಮದು ಬೇರೆ ರಾಜಕೀಯ ಪಕ್ಷವಾಗಿದೆ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮುಂದುವರಿದು ನಮ್ಮ ಜ್ಯಾತ್ಯಾತೀತ ಎನ್ನುವ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಎಂದಿಗೂ ಜಾತ್ಯತೀತ, ಜಾತ್ಯತೀತವಾಗಿಯೇ ಉಳಿಯಲಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಜೆಡಿಎಸ್ ಸರ್ವ ಜನಾಂಗದ ಶಾಂತಿಯ ತೋಟದ ಪರಿಕಲ್ಪನೆ ಹೊಂದಿದ್ದು.
ನಾವು ಯಾವುದೇ ನಿರ್ದಿಷ್ಟ ಧರ್ಮ, ಜಾತಿ ಸಮುದಾಯದ ಆಧಾರದ ಮೇಲೆ ರಾಜಕಾರಣ ಮಾಡಿಕೊಂಡು ಬಂದವರಲ್ಲ. ಎಲ್ಲರನ್ನೂ ಸಮಾನವಾಗಿ ನೋಡುವ ಕೆಲಸವನ್ನು ಪಕ್ಷ ಮಾಡಿದೆ ಮತ್ತು ಮಾಡಲಿದೆ. ನಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವ ಕಾರಣಕ್ಕೆ ಸಿದ್ಧಾಂತದಲ್ಲೂ ರಾಜಿ ಮಾಡಿಕೊಂಡಿದೆ ಎಂದು ಅರ್ಥವಲ್ಲ, ನಾವು ಎಂದೆಂದಿಗೂ ಜಾತ್ಯಾತೀತರಾಗಿಯೇ ಉಳಿಯಲಿದ್ದೇವೆ ಎಂದು ಪುನರುಚ್ಚರಿಸಿದ್ದಾರೆ.












Click it and Unblock the Notifications