ಮೈತ್ರಿ ಬಳಿಕ ನಿಖಿಲ್ ಕುಮಾರಸ್ವಾಮಿ ಆಕ್ಟೀವ್: ಮಂಡ್ಯದಿಂದ ಮತ್ತೆ ಸ್ಪರ್ಧೆ? ಸುಮಲತಾ ಭವಿಷ್ಯವೇನು?

ಮಂಡ್ಯ, ನವೆಂಬರ್‌ 10: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್‌ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಗೆಲುವು ಸಾಧಿಸಿದ್ರು. ಆದರೆ, ನಾನು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡಲ್ಲ, ಮುಂದೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದ ಸುಮಲತಾ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಹೌದು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್‌ ಇದೀಗ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಭರ್ಜರಿ ತಯಾರಿ ನಡೆಸಿದ್ದಾರೆ. ಇತ್ತ ಕಾಂಗ್ರೆಸ್‌ ಗೆ 2024 ರಲ್ಲಿ ನಡೆಯಲಿರು ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡಲು ಬಿಜೆಪಿ- ಜೆಡಿಎಸ್‌ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದು ಖಚಿತವಾಗಿದ್ದು, ಹಾಲಿ ಮಂಡ್ಯ ಸಂಸದೆಯಾಗಿರುವ ಸುಮಲತಾ ಅವರ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದೆ.

Nikhil Kumaraswamy may run for Mandya Lok Sabha seat. What Will Be Sumalathas Next Move?

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಶುರುವಾದ ಸುಮಲತಾ ಹಾಗೂ ಕುಮಾರಸ್ವಾಮಿಯ ರಾಜಕೀಯ ಜಟಾಪಟಿ ಹಲವು ವರ್ಷಗಳ ಕಾಲ ಮುಂದುವರೆದಿದ್ದು, ಜೆಡಿಎಸ್‌ ನಾಯಕರನ್ನ ತೀವ್ರವಾಗಿ ರಾಜಕೀಯವಾಗಿ ದ್ವೇಷಿಸುತ್ತಿದ್ದ ಸುಮಲತಾ ಅವರು ಈ ಬಾರೀ ಮಂಡ್ಯ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಏಕೆಂದರೆ, ಮೈತ್ರಿ ವಿಚಾರದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್‌ ನಾಯಕ ಜೊತೆಗೆ ಚರ್ಚೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು, 28 ಕ್ಷೇತ್ರಗಳ ಪೈಕಿ 4 ರಿಂದ 5 ಕ್ಷೇತ್ರವನ್ನ ನೀಡುವಂತೆ ಬಿಜೆಪಿ ನಾಯಕಯ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ಮಂಡ್ಯ ಕ್ಷೇತ್ರವೂ ಒಂದಾಗಿದ್ದು, ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಇನ್ನೂ ಮೈತ್ರಿ ಮಾತುಕತೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಈ ಹಿಂದೆ ಭೇಟಿ ಮಾಡಿದ ವೇಳೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನ ಕರೆದುಕೊಂಡು ಹೋಗಿದ್ದು, ಸಾಕಷ್ಟು ಪ್ರಶ್ನಗೆಗಳನ್ನ ಹುಟ್ಟುಹಾಕುವಂತೆ ಮಾಡಿತ್ತು. ಅಲ್ಲದೇ ಮಂಡ್ಯ ಕ್ಷೇತ್ರದ ವಿಚಾರವಾಗಿಯೂ ಈ ವೇಳೆ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆದಿದ್ದು, ಮಂಡ್ಯ ಕ್ಷೇತ್ರ ದಳಪತಿಗಳ ಭದ್ರಕೋಟೆಯಾಗಿದೆ. ಈ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಹೆಚ್‌ ಡಿ ದೇವೇಗೌಡ್ರು ಹಾಗೂ ಕುಮಾರಸ್ವಾಮಿ ಪ್ಲಾನ್‌ ನಡೆಸಿದ್ದು, ಅದರಂತೆ ಅಮಿತ್‌ ಶಾ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿಖಿಲ್‌ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ನಡೆಸಲಿದ್ದಾರೆ ಎಂಬುದು ಇನ್ನಷ್ಟು ದಟ್ಟವಾಗಿದೆ.

ಇನ್ನೂ ಹೈಕಮಾಂಡ್‌ ನಾಯಕರ ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ಚರ್ಚೆ ನಡೆಸಿದ ಬಳಿಕ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಹಿರಿಯ ನಾಯಕರಾದ ಬಿ ಎಸ್‌ ಯಡಿಯೂರಪ್ಪ, ಮತ್ತು ಮಾಜಿ ಸಚಿವ ಹಾಗೂ ಒಕ್ಕಲಿಗ ನಾಯಕರಾದ ಡಾ. ಸಿ ಎನ್‌ ಅಶ್ವಥ್‌ ನಾರಾಯಣ್‌ ಅವರನ್ನ ನಿಖಿಲ್‌ ಕುಮಾರಸ್ವಾಮಿ ಭೇಟಿ ಮಾಡಿದ್ದು, ಈ ವೇಳೆ ಮಂಡ್ಯ ಕ್ಷೇತ್ರದ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Nikhil Kumaraswamy may run for Mandya Lok Sabha seat. What Will Be Sumalathas Next Move?

ಸುಮಲತಾ ರಾಜಕೀಯ ಭವಿಷ್ಯವೇನು?

2019 ರಲ್ಲಿ ಸುಮಲತಾ ಅವರಿಗೆ ಸೋಲು ಕಂಡ ದಳಪತಿಗಳು ಮತ್ತೆ ಈ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಮರಳಿ ಪಡೆಯಲು ಭರ್ಜರಿ ಸಿದ್ದತೆಯನ್ನ ಜೆಡಿಎಸ್‌ ನಾಯಕರು ನಡೆಸಿದ್ದು, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಹಾಗಾದ್ರೆ ಮಂಡ್ಯ ಹಾಲಿ ಸಂಸದೆಯಾಗಿರುವ ಸುಮಲತಾ ಅವರು ರಾಜಕೀಯದ ಮುಂದಿನ ನಡೆ ಏನು ಎಂಬ ಪ್ರಶ್ನೆ ಉದ್ಭವವಾಗಿದೆ.

ಸುಮಲತಾ ಅಂಬರೀಷ್ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಟಿಕೆಟ್‌ ಸಿಗುವುದು ಕಷ್ಟವಾಗಿದೆ. ಮೈತ್ರಿಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತರ ಜೆಡಿಎಸ್‌ ತೆಕ್ಕೆಗೆ ಸಿಗಲಿದೆ. ಹೀಗಾಗಿ ಸುಮಲತಾ ಅವರು ಮುಂದಿನ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿ ಕೆಲವು ತಿಂಗಳಿನಿಂದ ಹರಿದಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+