ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಪ್ರದೇಶ ಸಿಎಂ ಜಗನ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

|
Google Oneindia Kannada News

Recommended Video

ಆಂಧ್ರದ ಮುಖ್ಯಮಂತ್ರಿ ಭೇಟಿಯಾಗಿದ್ದೇಕೆ ನಿಖಿಲ್ ಕುಮಾರಸ್ವಾಮಿ? | Oneindia Kannada

ಬೆಂಗಳೂರು, ಜೂನ್ 11 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯದಲ್ಲಿ ಮತ್ತಷ್ಟು ಸಕ್ರಿಯರಾಗಿದ್ದು, ಹಲವು ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರ ಫೇಸ್ ಬುಕ್ ಪುಟದಲ್ಲಿ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದ ಫೋಟೋವನ್ನು ಹಂಚಿಕೊಂಡಿದ್ದಾರೆ. 'ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರನ್ನು ವಿಜಯವಾಡಾದಲ್ಲಿ ಭೇಟಿಯಾಗಿ, ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದೆ' ಎಂದು ಪೋಸ್ಟ್ ಮಾಡಿದ್ದಾರೆ.

ಆಂಧ್ರ ದಿಗ್ವಿಜಯದ ನಂತರ ಜಗನ್ ಕಣ್ಣು ತೆಲಂಗಾಣದ ಮೇಲೆ!ಆಂಧ್ರ ದಿಗ್ವಿಜಯದ ನಂತರ ಜಗನ್ ಕಣ್ಣು ತೆಲಂಗಾಣದ ಮೇಲೆ!

ವಿಜಯವಾಡದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. 'ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿರುವ ಜಗನ್ ರವರು ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದರು' ಎಂದು ನಿಖಿಲ್ ಕುಮಾರಸ್ವಾಮಿ ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿಯನ್ನು ಕೊಡಲಿರುವ ದೇವೇಗೌಡರುನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿಯನ್ನು ಕೊಡಲಿರುವ ದೇವೇಗೌಡರು

ಪ್ರೇರಣೆ ನೀಡುವಂತಹದ್ದು

ಪ್ರೇರಣೆ ನೀಡುವಂತಹದ್ದು

ಆಂಧ್ರದಲ್ಲಿ 'ಜಗನ್ ಅಣ್ಣಾ' ಎಂದೇ ಜನಪ್ರಿಯರಾಗಿರುವ ಜಗನ್ ಮೋಹನ್ ರೆಡ್ಡಿಯವರ ರಾಜಕೀಯ ಜೀವನ, ರಾಜಕೀಯ ಕ್ಷೇತ್ರದಲ್ಲಿರುವ ಎಲ್ಲ ಯುವಕರಿಗೆ, ಕಾರ್ಯಕರ್ತರಿಗೆ ಪ್ರೇರಣೆ ನೀಡುವಂಥದ್ದು. ಹತ್ತು ವರ್ಷಗಳಿಗೂ ಹೆಚ್ಚು ಸುಧೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡಲಿ

ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡಲಿ

ಜನರ ಸೇವೆಗಾಗಿ ಅವರ ಜಗನ್ ಮೋಹನ್ ರೆಡ್ಡಿ ಅವರ ಬದ್ದತೆ ಮತ್ತು ಎದುರಾದ ಎಲ್ಲ ಅಡೆತಡೆ, ಸೋಲು, ಸವಾಲುಗಳನ್ನು ಮೀರಿ, ಗುರಿಮುಟ್ಟುವವರೆಗೂ ವಿರಮಿಸದ ಅವರ ಛಲ, ದಿಟ್ಟತನ, ಹೋರಾಟಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಅವಕಾಶವನ್ನು ಅವರು ಸಂಪೂರ್ಣವಾಗಿ ಬಳಸಿಕೊಂಡು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹೃತ್ಪೂರ್ವಕವಾಗಿ ನಿಖಿಲ್ ಕುಮಾರಸ್ವಾಮಿ ಹಾರೈಸಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೆ ಸಲಹೆ

ನಿಖಿಲ್ ಕುಮಾರಸ್ವಾಮಿಗೆ ಸಲಹೆ

ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿರುವ ಜಗನ್ ರವರು ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದರು. ಇಂತಹ ಸಂದರ್ಭದಲ್ಲಿ ನನ್ನಂತಹ ಯುವ ರಾಜಕಾರಣಿಗಳಿಗೆ ಉತ್ತಮ ಅವಕಾಶಗಳಿವೆ, ಸಾರ್ವಜನಿಕ ಜೀವನದಲ್ಲಿ, ಯಾವುದಕ್ಕೂ ಹಿಂಜರಿಯದೆ ಜನಸೇವೆಯೊಂದನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯುವಂತೆ ನನಗೆ ಸಲಹೆ ನೀಡಿ, ರಾಜಕೀಯದಲ್ಲಿ ಉತ್ತಮ ಭವಿಷ್ಯವನ್ನು ಹಾಗು ಯಶಸ್ಸನ್ನು ಹಾರೈಸಿದರು ಎಂದು ನಿಖಿಲ್ ಕುಮಾರಸ್ವಾಮಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಹಲವು ನಾಯಕರ ಭೇಟಿ

ಹಲವು ನಾಯಕರ ಭೇಟಿ

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಸುಮ್ಮನೆ ಕುಳಿತಿಲ್ಲ. ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದರು.

English summary
Karnataka Chief Minister H.D.Kumaraswamy son Nikhil Kumaraswamy met the Andhra Pradesh Chief Minister Jagan Mohan Reddy. Nikhil Kumaraswamy shared photo in Facebook.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X