ಸೋಲಿನ ಬಳಿಕ ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಚರ್ಚೆಯಾಗಿದ್ದೇನು?
ನವದೆಹಲಿ, ಡಿಸೆಂಬರ್ 10: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಕಂಡ ಬಳಿಕ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು ಎಂದು ಹೇಳಿದರು.

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ, ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಎಲ್ಲಾ ನಾಯಕರು ಸಂಘಟನೆಗೆ ಹೆಚ್ಚು ಕೊಡಬೇಕು ಎಂದು ಸಲಹೆ ಮಾಡಿದರು. ಕರ್ನಾಟಕ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಜನರು ಸಾಕಷ್ಟು ತೊಂದರೆಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಅರವತ್ತು ವರ್ಷ ಜನಪರವಾಗಿ ಕೆಲಸ ಮಾಡಿರುವ ದೇವೇಗೇಗೌಡರ ಬಗ್ಗೆ ಇಂಥ ಟೀಕೆ ಮಾಡುವುದು ಸರಿಯಲ್ಲ. ಅವರು ಶಾಸಕ ಸ್ಥಾನಕ್ಕೆ ಶೋಭೆ ತರುವ ಮಾತು ಆಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರ ವಿರುದ್ಧ ತಿರುಗೇಟು ಕೊಟ್ಟರು. ಇನ್ನೂ ನಾನು ಸೋಲನ್ನು ತಲೆಬಾಗಿ ಸ್ವೀಕರಿಸಿದ್ದೇನೆ. ದೇವೇಗೌಡರು ನೆಲ, ಜಲದ ವಿಚಾರದಲ್ಲಿ ನಿರಂತರ ಹೋರಾಟ ನಡೆಸಿದ್ದಾರೆ. ಈಗಲೂ ಯುವ ಸಂಸದರು ನಾಚುವಂತೆ ಅವರು ಶಿಸ್ತುಬದ್ದವಾಗಿ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನರ ಸಲುವಾಗಿ ಅವರು ರಾಜಕೀಯದಲ್ಲಿ ಮುಂದುವರಿದ್ದಾರೆ, ಮುಂದೂ ಮುಂದುವರೆಯುತ್ತಾರೆ ಎಂದರು.
ದೇವೇಗೌಡರಿಗೆ ಮೋದಿಯವರೇ ಸ್ವತಃ ಫೋನ್ ಮಾಡಿ ರಾಜಕೀಯ ತೊರೆಯದಂತೆ ಹೇಳಿದ್ದರು. ರಾಜ್ಯಸಭೆ ತೊರೆಯದಂತೆ ಪ್ರಧಾನಿ ಮೋದಿಯವರೇ ಹೇಳಿ, ದೇಶಕ್ಕೆ ನಿಮ್ಮ ಮಾರ್ಗದರ್ಶನ ಬೇಕು ಎಂದು ಕೋರಿದ್ದರು. ಅವರ ಮಾತನ್ನು ಮೀರಲಾಗದೇ ದೇವೇಗೌಡರು ರಾಜಕಾರಣದಲ್ಲಿ ಇದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.
ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ ಜನ್ಮದಿನ ಆಚರಿಸಬೇಕು ಎಂದು ನಮ್ಮ ನಾಯಕರು ನಿರ್ಧಾರ ಮಾಡಿದ್ದರು. ಆದರೆ, ಮಂಡ್ಯ ಸಾಹಿತ್ಯ ಸಮ್ಮೇಳನ, ವಿಧಾನಸಭೆ ಮತ್ತು ಸಂಸತ್ ಅಧಿವೇಶನ ನಡೆಯುತ್ತಿದೆ. ಹಾಗೆಯೇ ಕೇಂದ್ರ ಸಚಿವರಿಗೂ ಸಾಕಷ್ಟು ಪೂರ್ವಾನಿಗದಿತ ಕಾರ್ಯಕ್ರಮಗಳು ಇವೆ. ಈ ಹಿನ್ನೆಲೆಯಲ್ಲಿ ಸ್ವತಃ ಕಾರ್ಯಕ್ರಮ ಬೇಡವೆಂದು ಸ್ವತಃ ಕುಮಾರಸ್ವಾಮಿ ಅವರೇ ಸೂಚಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ನಿಖಿಲ್ ಅವರು ತಿಳಿಸಿದರು.
ಉಪ ಚುನಾವಣೆಯಲ್ಲಿ ಇಂಥ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ. ಅದನ್ನು ಪ್ರಶ್ನೆ ಮಾಡಬೇಕಿದೆ. ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ. ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು.
ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ಅವರು ನಿರ್ಧಾರ ಮಾಡಿದರು. ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಚುನಾವಣೆ ನಡೆಸಲು ನಮ್ಮ ಬಳಿ ಸಮಯವಿತ್ತು.ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಹೇಳಿದರು.
ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ. ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ. ಚನ್ನಪಟ್ಟಣದ ಇತಿಹಾಸದಲ್ಲಿಯೇ ₹1200 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications