Nikhil Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ: ಹೇಳಿದ್ದೇನು?

ಬೆಂಗಳೂರು, ಜುಲೈ 10: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿ ಕೆ ಶಿವಕುಮಾರ್‌ ನಿಯೋಗ ಮನವಿ ಸಲ್ಲಿಸಿದ್ದು,, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Nikhil Kumaraswamy opposition to replace Ramanagara district name

ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದು ಮರುನಾಮಕರಣವಷ್ಟೇ, ಹೊಸ ಜಿಲ್ಲೆಯಲ್ಲ: ಡಿ ಕೆ ಶಿವಕುಮಾರ್‌

ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು. ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು.

ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ಅಗತ್ಯ. ಬೆಂಗಳೂರು ಜಾಗತಿಕ ಮನ್ನಣೆ ಹೊಂದಿದ್ದು, ಈ ಜಿಲ್ಲೆಯ ಹೆಸರು ಉಳಿಸಿಕೊಳ್ಳಲು ನನ್ನ ಮುಖಂಡತ್ವದಲ್ಲಿ ಜಿಲ್ಲೆಯ ನಾಯಕರು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ.

ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ. ನಮ್ಮ ಹೆಸರನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ.

ಹೊಸ ಜಿಲ್ಲೆಗೆ ನೀಡಿರುವ ಪ್ರಸ್ತಾವನೆಯಲ್ಲಿ ಯಾವ ಯಾವ ಕ್ಷೇತ್ರಗಳು ಬರಲಿವೆ ಎಂಬ ಪ್ರಶ್ನೆಗೆ, "ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ. ಇರುವ ಜಿಲ್ಲೆ ಹಾಗೇ ಇರಲಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ - ಈ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣ ಮುಂದಾಗಿದ್ದೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+