'2024ಕ್ಕೆ ಮಂಡ್ಯ ಸಂಸದರು ಬೆಂಗಳೂರಿನಲ್ಲಿ ಸ್ಪರ್ಧೆ': ನಿಖಿಲ್ ಕುಮಾರಸ್ವಾಮಿ
ಮಂಡ್ಯ,ಜನವರಿ 14: 2024ರಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹೊಂದಾಣಿಕೆ ರಾಜಕಾರಣ ಅನ್ನೋದು ಮಂಡ್ಯ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಪ್ರಾರಂಭವಾಗಿದೆ. ಈ ಮೂಲಕ ಕಾಂಗ್ರೆಸ್ - ಜೆಡಿಎಸ್ ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ ಎಂದು ಹೇಳಿದ್ದ ಸುಮಲತಾ ಅಂಬರೀಶ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇನ್ನೂ ರೈತ ಸಂಘ, ಕಾಂಗ್ರೆಸ್, ಬಿಜೆಪಿಯವರು ಕೇವಲ ಲೋಕಸಭಾ ಚುನಾವಣೆ ಅಷ್ಟೇ ಅಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರು ಹೊಂದಾಣಿಕೆ ರಾಜಕಾರಣ ಮಾಡಿದ್ದರೂ ಅಂತಾ ಇಡೀ ರಾಜ್ಯ ನೋಡಿದೆ. ಹೊಂದಾಣಿಕೆ ಬಗ್ಗೆ ಸಂಸದರಿಗೆ ಮಾತನಾಡುವ ನೈತಿಕತೆಯ ಹಕ್ಕು ಉಳಿದಿಲ್ಲ. 2024ಕ್ಕೆ ಮಂಡ್ಯ ಜಿಲ್ಲೆಯಲ್ಲಿ ಅಲ್ಲ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡಬೇಕು ಅಂತ ಚರ್ಚೆ ಮಾಡ್ತಿದ್ದಾರೆ. ಸಂಸದರು ಫಸ್ಟ್ ಅದರ ಬಗ್ಗೆ ಅವರು ಮಾತನಾಡಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ತಿರುಗೇಟು ನೀಡಿದ್ದಾರೆ.

ಇನ್ನೂ ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನಯಾತ್ರೆ ವಿಚಾರವಾಗಿ ಮಾತನಾಡಿ, ಈಗಾಗಲೇ 6 ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪ್ರವಾಸ ಮಾಡಿ ಯಶಸ್ವಿಯಾಗಿದೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಮುಕ್ತಾಯಗೊಳಿಸುತ್ತಿದ್ದಾರೆ. ಮಂಡ್ಯದಲ್ಲಿ ಕುಮಾರಣ್ಣ ಗೆ ಅದ್ದೂರಿಯಾಗಿ ಸ್ವಾಗತಿಸಿ ಆಶೀರ್ವದಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಜೆಡಿಎಸ್ ಬಾವುಟ ಹಾರಿಸುತ್ತಾರೆ. ಜನರ ಆಶೀರ್ವಾದ ಕೊಟ್ಟಿದ್ದಾರೆ ಕುಮಾರಣ್ಣರ ಬೆಂಬಲಕ್ಕೆ ಜನರು ಇದ್ದಾರೆ ಎಂದು ಹೇಳಿದರು.
ಸ್ಯಾಂಟ್ರೋ ರವಿ ಅರೆಸ್ಟ್ ವಿಚಾರವಾಗಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾರೆ. ಕುಮಾರಣ್ಣ ಅವರು ಸ್ಯಾಂಟ್ರೋ ರವಿಯ ಹಿನ್ನೆಲೆ ಬಗ್ಗೆ ಹೇಳಿದ್ದಾರೆ. ಸರ್ಕಾರದಲ್ಲಿ ಕೆಲವು ದೊಡ್ಡ ದೊಡ್ಡ ಮಂತ್ರಿಗಳ ಜೊತೆ ಸರ್ಕಾರದ ಜೊತೆ ಇನ್ವಾಲ್ಮೆಂಟ್ ಬಗ್ಗೆ ಬಿಚ್ಚಿಟ್ಟಿದ್ದಾರೆ. ಕುಮಾರಣ್ಣ ಅವರು ಎಲ್ಲ ಮಾಹಿತಿಯನ್ನು ಸಂಪೂರ್ಣ ಬಿಚ್ಚಿಟ್ಟಿದ್ದಾರೆ ಎಂದರು. ಸರ್ಕಾರ ನಡೆಸುತ್ತಿರುವವರು ಬಿಜೆಪಿಯವರು. ಯಾವ ರೀತಿ ತನಿಖೆ ನಡೆಸುತ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ. ಈ ಕೇಸ್ ಅನ್ನು ಇಲ್ಲಿಗೆ ಮುಚ್ಚಾಕ್ತಾರಾ ಏನೋ ಗೊತ್ತಿಲ್ಲ. ಆದರೆ, ಕೂಲಂಕುಷವಾಗಿ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.












Click it and Unblock the Notifications