ನಿಖಿಲ್ ಕುಮಾರಸ್ವಾಮಿಗೂ ಕೋವಿಡ್ ಸೋಂಕು ದೃಢ
ಬೆಂಗಳೂರು, ಏಪ್ರಿಲ್ 17; ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರಸ್ವಾಮಿಗೆ ಕೋವಿಡ್ ಸೋಂಕು ತಗುಲಿದೆ. ಎಚ್. ಡಿ. ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸೋಂಕು ತಗುಲಿರುವ ಕುರಿತು ಮಾಹಿತಿ ನೀಡಿದ್ದಾರೆ. "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮೂಲಕ ನಿಖಿಲ್ ಕುಮಾರಸ್ವಾಮಿ ಮನವಿಯನ್ನು ಮಾಡಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ನಿಖಿಲ್ ಕುಮಾರಸ್ವಾಮಿ, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ" ಎಂದು ಹೇಳಿದ್ದರು.
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
"ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ" ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದರು.
ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಸಹ ಹೋಂ-ಕ್ವಾರಂಟೈನ್ ಆಗಿದ್ದಾರೆ. ವೈದ್ಯರು ನೀಡಿದ ಸೂಚನೆಯಂತೆ ಮುಂದಿನ ಸೂಚನೆ ಬರುವವರೆಗೂ ಅವರು ಹೋಂ ಕ್ವಾರಂಟೈನ್‌ನಲ್ಲೇ ಇರಲಿದ್ದಾರೆ.












Click it and Unblock the Notifications