ಸಿ ಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ: ನಿಖಿಲ್‌ ಆಶ್ವರ್ಯ ಏನು ಇಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 23: ಬಿಜೆಪಿಗೆ ಸಿಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿಯಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು ಇದರಲ್ಲಿ ಆಶ್ಚರ್ಯ ಏನು ಇಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಹೇಳಿದರು.

ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಅಂದಿದ್ರು, ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದ್ರೆ NDA ಕಡೆಯಿಂದ ಘೋಷಣೆ ಆಗಬೇಕು. ನಿನ್ನೇ ಕುಮಾರಣ್ಣ ಅವರು ಇದನ್ನೇ ಹೇಳಿದರೆ ತಾಳಿದವನು ಬಾಳಿಯಾನು ಅಂತ. ಅಂತಿಮವಾಗಿ ನಮ್ಮ ನಾಯಕರು ಮತ್ತು ಬಿಜೆಪಿ ನಾಯಕರು ಅಭ್ಯರ್ಥಿಯನ್ನ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದರು.

Nikhil Kumaraswamy s reaction on CP Yogeshwar joining Congress

ಕಾಂಗ್ರೆಸ್ ಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿಯೇ ಟಾರ್ಗೆಟ್ ಮಾಧ್ಯಮ ಪ್ರಶ್ನೆಗೆ ಉತ್ತರಿಸಿ ಅವರು, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ 14 ಲೋಕಸಭೆ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಗೆದ್ದಿದ್ದೇವೆ. ಅದ್ರಲ್ಲಿ ಪ್ರಾಮುಖ ಪಾತ್ರ ನಮ್ಮ ಕಾರ್ಯಕರ್ತರು, ಕುಮಾರಣ್ಣನ ನಾಯಕತ್ವ ಈ ವಿಚಾರಕ್ಕೆ ಕುಮಾರಣ್ಣ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಣ್ಣ ಅವರು ತುಳಿತಾರೆ ಅನ್ನೋ ಮಾತಿಗೆ ಭವಿಷ್ಯ ಇದರ ಹಿಂದೆ ಕುಮ್ಮಕ್ಕು ಕೊಟ್ಟವರು ಯಾರು ಅನ್ನುವವುದು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕಳೆದ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಅವರ ಹೇಳಿಕೆಗಳನ್ನ ಗಮನಿಸಿದ್ದೇವೆ. ಅವರು ಗೊಂದಲದ ಹೇಳಿಕೆ ನೀಡಿದ್ರು. ಆ ಮೇಲೆ ಕುಮಾರಸ್ವಾಮಿ ಅವರು. ಒಕ್ಕಲಿಗರನ್ನು ತುಳಿಯುತ್ತಿದ್ದಾರೆ ಅಂತೆಲ್ಲಾ ಹೇಳಿದ್ದರು. ಆದರೆ ಎರಡು ದಿನಗಳಿಂದ ಏನೆಲ್ಲ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಿಎಂ, ಡಿಸಿಎಂ, ಸಚಿವರು, ಅಕ್ಕ- ಪಕ್ಕದ ನಾಯಕರು ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ತಿಳಿಸಿದರು.

ದೊಡ್ಡ ದೊಡ್ಡ ನಾಯಕರುಗಳು ಚುನಾವಣೆಯಲ್ಲಿ ಸೋತಿಲ್ಲವೇ? ದೇವೇಗೌಡರು ಸೋತಿಲ್ಲವೇ? ನಾನು ಎರಡು ಬಾರಿ ಸೋತಿರಬಹುದು. ಆದರೆ ಸತ್ತಿಲ್ಲ. ಹೀಗಾಗಿ ಚುನಾವಣೆಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಂಡ್ಯದಲ್ಲಿ ನನಗೆ ಮೊದಲ ಅವಕಾಶ ಕೊಟ್ರು ಆ ಚುನಾವಣೆ ಯಾವ ರೀತಿ ನಡೆದಿದೆ ಅಂತ ಇಡೀ ರಾಜ್ಯದ ಜನತೆಗೆ ಗೊತ್ತು. ರಾಜಕೀಯ ಷಡ್ಯಂತ್ರ ಅಲ್ಲಿಗೆ ಸುಮ್ಮನೆ ಆಗಲಿಲ್ಲ..ನಂತರ ರಾಮನಗರದಲ್ಲಿ ಕಾರ್ಯಕರ್ತರ ಒತ್ತಡದಿಂದ ನಾನು ಸ್ಪರ್ಧೆ ಮಾದಿದೆ. ರಾಮನಗರದಲ್ಲೂ ಕಾಣದ ರಾಜಕೀಯ ಕೈವಾಡ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+