ದ್ವಿತೀಯ ಪಿಯು ಗಣಿತ ಪತ್ರಿಕೆಗೆ 9 ಗ್ರೇಸ್ ಅಂಕ
ಬೆಂಗಳೂರು, ಏ. 9 : ದ್ವಿತೀಯ ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ 9 ಗ್ರೇಸ್ ಅಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ತಪ್ಪಿರುವ ಪ್ರಶ್ನೆಗೆ ಉತ್ತರ ಬರೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಅಂಕಗಳನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಪದವಿ ಪೂರ್ವ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಷಮಾ ಗೋಡಬೋಲೆ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ ದೋಷವಿದ್ದ ಕಾರಣ 9 ಗ್ರೇಸ್ ಅಂಕಗಳನ್ನು ನೀಡುವಂತೆ ಮೌಲ್ಯಮಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. [ಪಿಯು ವಿದ್ಯಾರ್ಥಿಗಳಿಗೆ 5 ಗ್ರೇಸ್ ಅಂಕಗಳು]

ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿರುವ ಪ್ರಶ್ನೆಗಳಿಗೆ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆಗೆ ಉತ್ತರ ನೀಡದಿದ್ದಲ್ಲಿ ಅಂಕಗಳು ದೊರೆಯುವುದಿಲ್ಲ. [ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ]
ಇಂಗ್ಲಿಷ್‌ಗೆ 5 ಗ್ರೇಸ್ ಅಂಕಗಳು : ದ್ವಿತೀಯ ಪಿಯುಸಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿ ದೋಷ ವಿರುವುದರಿಂದ ವಿದ್ಯಾರ್ಥಿಗಳಿಗೆ 5 ಗ್ರೇಸ್ ಅಂಕ ನೀಡುವಂತೆ ಮೌಲ್ಯಮಾಪಕರಿಗೆ ಸೂಚನೆ ನೀಡಲಾಗಿತ್ತು. ಸೋಮವಾರ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿದೆ ಎಂದು ಮೌಲ್ಯಮಾಪನ ಬಹಿಷ್ಕರಿಸಲಾಗಿತ್ತು.












Click it and Unblock the Notifications