ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯು ಗಣಿತ ಪತ್ರಿಕೆಗೆ 9 ಗ್ರೇಸ್ ಅಂಕ

|
Google Oneindia Kannada News

ಬೆಂಗಳೂರು, ಏ. 9 : ದ್ವಿತೀಯ ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ 9 ಗ್ರೇಸ್ ಅಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ತಪ್ಪಿರುವ ಪ್ರಶ್ನೆಗೆ ಉತ್ತರ ಬರೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಅಂಕಗಳನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಪದವಿ ಪೂರ್ವ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಷಮಾ ಗೋಡಬೋಲೆ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ ದೋಷವಿದ್ದ ಕಾರಣ 9 ಗ್ರೇಸ್ ಅಂಕಗಳನ್ನು ನೀಡುವಂತೆ ಮೌಲ್ಯಮಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. [ಪಿಯು ವಿದ್ಯಾರ್ಥಿಗಳಿಗೆ 5 ಗ್ರೇಸ್ ಅಂಕಗಳು]

Maths

ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿರುವ ಪ್ರಶ್ನೆಗಳಿಗೆ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆಗೆ ಉತ್ತರ ನೀಡದಿದ್ದಲ್ಲಿ ಅಂಕಗಳು ದೊರೆಯುವುದಿಲ್ಲ. [ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ]

ಇಂಗ್ಲಿಷ್‌ಗೆ 5 ಗ್ರೇಸ್ ಅಂಕಗಳು : ದ್ವಿತೀಯ ಪಿಯುಸಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿ ದೋಷ ವಿರುವುದರಿಂದ ವಿದ್ಯಾರ್ಥಿಗಳಿಗೆ 5 ಗ್ರೇಸ್ ಅಂಕ ನೀಡುವಂತೆ ಮೌಲ್ಯಮಾಪಕರಿಗೆ ಸೂಚನೆ ನೀಡಲಾಗಿತ್ತು. ಸೋಮವಾರ ಪ್ರಶ್ನೆ ಪತ್ರಿಕೆಯಲ್ಲಿ ದೋಷವಿದೆ ಎಂದು ಮೌಲ್ಯಮಾಪನ ಬಹಿಷ್ಕರಿಸಲಾಗಿತ್ತು.

English summary
Karnataka Board of the Pre-University Education has decided to award 9 grace marks for maths paper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X