ಮತ್ತೆ 9 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು, ಜೂನ್ 17: ಕೆಲವು ದಿನಗಳ ಹಿಂದಷ್ಟೆ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇಂದು ಮತ್ತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೇ 31 ರಂದು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು, ಇಂದು ಸಹ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು, ಇದೇ ದಿನವೇ 9 ಐಎಎಸ್ ಅಧಿಕಾರಿಗಳನ್ನು ಸಹ ವರ್ಗಾವಣೆ ಮಾಡಿದೆ.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ಸರ್ಕಾರದ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದ ಮಹೇಂದ್ರ ಜೈನ್ ಅವರನ್ನು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಇವರನ್ನು ಉನ್ನತ ಶಿಕ್ಷಣ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿಯೂ ನೇಮಕ ಮಾಡಲಾಗಿದೆ.

ಉನ್ನತ ಶಿಕ್ಷಣ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದ ಬಿ.ಎಚ್.ಅನಿಲ್ ಕುಮಾರ್ ಆಹಾರ ಮತ್ತು ನಾಗರೀಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಜಲ ಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ ಆಗಿದ್ದ ರಾಕೇಶ್ ಸಿಂಗ್ ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಪದವಿ ಪೂರ್ವ ಇಲಾಖೆ ಆಯುಕ್ತರಾಗಿದ್ದ ಎನ್.ಮಂಜುಳಾ ಅವರನ್ನು ಆ ಸ್ಥಾನದ ಜೊತೆಗೆ ಬಿಡಿಎ ಯ ಆಯುಕ್ತರನ್ನಾಗಿ ಸಹ ನೇಮಿಸಲಾಗಿದೆ.
ಈ ಹಿಂದೆ ಮಂಡ್ಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಯಾವುದೇ ಹುದ್ದೆ ಇಲ್ಲದೆ ಇದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕ ಸ್ಥಾನಕ್ಕೆ ವರ್ಗ ಮಾಡಲಾಗಿದೆ.
ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿದ್ದ ಎಸ್‌ಎಸ್ ನಕುಲ್ ಅವರನ್ನು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದ ರಾಮ್ ಪ್ರಶಾಂತ್ ಮನೋಹರ್ ಅವರನ್ನು ಉದ್ಯೋಗ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಅತಿ ಸಣ್ಣ, ಸಣ್ಣ, ಮಧ್ಯಮ ವ್ಯಾಪಾರ ಇಲಾಖೆ ನಿರ್ದೇಶಕರಾಗಿದ್ದ ವೃಷಬೇಂದ್ರ ಮೂರ್ತಿ ಅವರನ್ನು ರೇಷ್ಮೆ ಕೃಷಿ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.












Click it and Unblock the Notifications