ಕಲ್ಯಾಣ ಕರ್ನಾಟಕಕ್ಕೆ ಈ ಕಾರಣಕ್ಕೆ ಬರ್ತಿದ್ದೇನೆ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹೇಳಿದ್ದಾರೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ.
ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ (MPLADS) ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ. • ವಿಜಯನಗರ: ಕಡಲೆ ಬೇಳೆ, ಹುರಿದ ಕಡಲೆ, ಕಡಲೆ ಚಿಕ್ಕಿ, ಬೀಜ ತೆಗೆಯಲ್ಪಟ್ಟ ಹುಣಸೆ ಬ್ಲಾಕ್ ಮತ್ತು ಹುಣಸೆ ಪಲ್ಪ್ (ಕಡಲೆ - 200 ಕೆ.ಜಿ/ಗಂ.; ಹುಣಸೆ - 100 ಕೆ.ಜಿ/ಗಂ.)

• ಬಳ್ಳಾರಿ: ಮೆಣಸಿನ ಪುಡಿ ಮತ್ತು ಮೆಣಸಿನ ಫ್ಲೇಕ್ಸ್ (250 ಕೆ.ಜಿ/ಗಂ.)
• ಕೊಪ್ಪಳ: ಹಣ್ಣಿನ ಪಲ್ಪ್, ಹಣ್ಣಿನ ಜ್ಯೂಸ್ ಮತ್ತು ಅಮಚೂರ್ ಪುಡಿ (500 ಕೆ.ಜಿ/ಗಂ.)
• ರಾಯಚೂರು: ಚಿಲಾ ಪ್ರೀಮಿಕ್ಸ್,ಕಡ್ಲೆ ಬೇಳೆ ಹಾಗೂ ತೊಗರಿ ದಾಲ್ ಮಿಲ್ (350 ಕೆ.ಜಿ/ಗಂ.)
• ಯಾದಗಿರಿ: ಕಡಲೆ ಬೆಣ್ಣೆ, ಹುರಿದ ಕಡಲೆ ಮತ್ತು ಕಡಲೆ ಎಣ್ಣೆ (300 ಕೆ.ಜಿ/ಗಂ.)
• ಕಲಬುರಗಿ: ಸಿರಿಧಾನ್ಯ ಫ್ಲೇಕ್ಸ್, ಪಾಪ್ಸ್, ಹಿಟ್ಟು ಮತ್ತು ಸಂಪೂರ್ಣ ಸಿರಿಧಾನ್ಯಗಳು (500 ಕೆ.ಜಿ/ಗಂ.)
• ಬೀದರ್: ಸೋಯಾಬೀನ್ ಟೋಫು ಮತ್ತು ಸೋಯಾ ಹಾಲು (300 ಕೆ.ಜಿ/ಗಂ.)
ಈ ಪ್ರವಾಸದ ಸಮಯದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಘಟಕಗಳ ಉದ್ಘಾಟನೆ ಮಾಡಲಾಗುತ್ತದೆ.
ಈ ಕೃಷಿ ಸಂಸ್ಕರಣೆ ಕೇಂದ್ರಗಳಿಂದ ತರಬೇತಿ ಪಡೆದ ರೈತರು ಮತ್ತು ಲಾಭ ಪಡೆಯುವ ರೈತರು ಹಾಗೂ ರೈತರ ಉತ್ಪಾದಕರ ಸಂಘಗಳು ಮತ್ತು ಅವರ ಕುಟುಂಬಗಳನ್ನು ಭೇಟಿಯಾಗಲು ಉತ್ಸುಕಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ.
ಜನರ ಕಮೆಂಟ್ ಏನು: ಇನ್ನು ನಿರ್ಮಲಾ ಸೀತಾರಾಮನ್ ಅವರು ಕನ್ನಡದಲ್ಲಿ ಟ್ವೀಟ್ ಹಂಚಿಕೊಂಡಿರುವುದಕ್ಕೆ ಕನ್ನಡಿಗರು ಸಂತೋಷ ಹಂಚಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಭಾರಿ ಹಾನಿಯಾಗಿದೆ, ದಯವಿಟ್ಟು ಗಮನ ಹರಿಸಬೇಕೆಂದು ವಿನಂತಿ, ಬರೋ ಟೈಮ್‌ನಲ್ಲಿ ಬಳ್ಳಾರಿ - ಕಲಬುರಗಿ ಹೈವೇ ಸ್ವಲ್ಪ ನೋಡ್ರಿ ಎಂದು ನೆಟ್ಟಿಗರು ಈ ಪೋಸ್ಟ್‌ಗೆ ಕಮೆಂಟ್ ಮಾಡಿದ್ದಾರೆ.
ಮೇಡಂ ಕಲಬುರಗಿ ಹಾಗೂ ಬೆಂಗಳೂರಿನ ನಡುವೆ ರೈಲು ವ್ಯವಸ್ಥೆಬೇಕಾಗಿದೆ, ದಯವಿಟ್ಟು ಕೇಂದ್ರ ರೈಲ್ವೆ ಸಚಿವರಿಗೆ ಹೇಳಿ ಎಂದಿದ್ದಾರೆ. ವಿಜಯ್ ಪಾಟೀಲ್ ಎನ್ನುವವರು ಅದ್ಭುತ ಪ್ರಯತ್ನ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ರೈತರಿಗೆ ಹೊಸ ಆರ್ಥಿಕ ಶಕ್ತಿ ನೀಡುತ್ತದೆ. ಸ್ಥಳೀಯ ಉದ್ಯೋಗಕ್ಕೂ ಇದು ಒಳ್ಳೆಯ ಹೆಜ್ಜೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹದಿಂದ ಹಾನಿಗೊಳಗಾದ ಇಂಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ಕೊಡಿ, ಕರ್ನಾಟಕದ ಈ ಭಾಗದಲ್ಲಿ ದಯವಿಟ್ಟು ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಿಸಿ ಎನ್ನುವ ಕಮೆಂಟ್‌ಗಳನ್ನು ನೆಟ್ಟಿಗರು ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications